ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕತೆಯಿಂದ ಸ್ಪಂದಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಭರವಸೆ
ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕತೆಯಿಂದ ಸ್ಪಂದಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಭರವಸೆ
ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ರವರನ್ನು ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಪದಾಧಿಕಾರಿಗಳು ಸ್ವಾಗತಿಸಿದರು.


ಕೋಲಾರ, ಮೇ ೧೯ (ಹಿ.ಸ) :

ಆ್ಯಂಕರ್ : ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕ ಸ್ಪಂದನೆ ನೀಡುವುದಾಗಿ ತಾಲ್ಲೂಕು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಉಮ ತಿಳಿಸಿದರು.

ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಇಂದು ಜಿಲ್ಲಾ ಪ್ರಥಮ ಶಾಲಾ ಮುಖ್ಯೋಪಾಧ್ಯಾಯರ ಸಂಘ ತಮಗೆ ನೀಡಿದ ಆತ್ಮೀಯ ಸ್ವಾಗತ ಸ್ವೀಕರಿಸಿ ಮಾತನಾಡಿದರು.

ಶಿಕ್ಷಕರು ತಾಲೂಕಿನಲ್ಲಿ ತಮ್ಮ ಕಾರ್ಯವನ್ನು ಪ್ರಾಮಾಣಿಕ ಮತ್ತು ನಿಷ್ಠೆಯಿಂದ ಮಾಡುತ್ತಿದ್ದು ಉತ್ತಮ ಫಲಿತಾಂಶವನ್ನು ನೀಡುತ್ತಿದ್ದು ಈ ರೀತಿಯಲ್ಲಿ ಉತ್ತಮ ಸತ್ಪ್ರಜೆಗಳನ್ನಾಗಿ ತಯಾರು ಮಾಡುತ್ತಿರುವುದು ಸ್ವಾಗತಾರ್ಹ ಸಂಗತಿಯಾಗಿದೆ.ಶಿಕ್ಷಕರು ಸದಾ ವಿದ್ಯಾರ್ಥಿಗಳಂತೆ ಪುಸ್ತಕ ಪ್ರೇಮಿಗಳಾಗಬೇಕು ಪುಸ್ತಕವನ್ನು ಓದಿ ಅರ್ಥೈಸಿಕೊಂಡು ಕಲಿಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಅವರು ಕೋರಿದರು.

ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಬಿ.ಎಂ. ರಾಧಮ್ಮ ಮಾತನಾಡಿ, ವರ್ಷದ ಆರಂಭದಲ್ಲಿಯೇ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರಗತಿಗೆ ನೆರವಾಗುವ ಎಲ್ಲ ಕಾರ್ಯಗಳಲ್ಲೂ ಶಿಕ್ಷಣ ಇಲಾಖೆಯ ಮಾರ್ಗದರ್ಶನವನ್ನು ಎಲ್ಲರೂ ಪಾಲಿಸಬೇಕು ಮತ್ತು ಇಲಾಖೆಯ ಗೌರವವನ್ನು ಕಾಪಾಡಬೇಕೆಂದು ತಿಳಿಸಿದರು.

ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾಧ್ಯಕ್ಷ ಜಿ. ಶ್ರೀನಿವಾಸ್ ಮಾತನಾಡಿ ಶೈಕ್ಷಣಿಕ ಪ್ರಗತಿಗೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರುಗಳು ಸ್ಪಂದಿಸುತ್ತಿದ್ದು ಅವರಿಗೆ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಲು, ಶಾಲೆಗಳ ಸರ್ವತೋಮುಖ ಬೆಳವಣಿಗೆಗೆ ಇಲಾಖೆ ನೆರವಾಗಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಮುಖಂಡರುಗಳಾದ ಬಿ.ಎಂ. ನಾರಾಯಣಸ್ವಾಮಿ, ಕೆ.ವಿ.ಜಗನ್ನಾಥ್, ಭಾಗ್ಯಲಕ್ಷ್ಮಮ್ಮ, ಕೋಟೇಶ್ವರರಾವ್, ಎಲ್.ಶ್ರೀನಿವಾಸ್, ವೆಂಕಟಲಕ್ಷಮ್ಮ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande