
ಬೆಂಗಳೂರು, 19 ಮೇ (ಹಿ.ಸ.) :
ಆ್ಯಂಕರ್ : ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಸಂಬಂಧ ಬೆಂಗಳೂರು ವಿಭಾಗದ ವಿವಿಧ ಜಿಲ್ಲೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ಮಂಗಳವಾರ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಯಿತು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಗಾರದಲ್ಲಿ ಭಾಗವಹಿಸಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಸಮರ್ಪಕವಾಗಿ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳಿಸುವ ಕುರಿತು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಾಯಿತು.
ಕಾರ್ಯಗಾರದಲ್ಲಿ ಮತದಾರರ ನೋಂದಣಿ, ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಹಾಗೂ ಮತದಾರರ ಪಟ್ಟಿಯ ನವೀಕರಣ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಬಗ್ಗೆ ತರಬೇತಿ ನೀಡಲಾಯಿತು.
ಚುನಾವಣಾ ಪ್ರಕ್ರಿಯೆಯಲ್ಲಿ ನಿಖರತೆ ಮತ್ತು ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.