ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕಿಯರ ಸಾವು
ಉಂಟಾಗಿದ್ದು
ಫೋಟೋ


ಗದಗ, 19 ಮೇ (ಹಿ.ಸ.) :

ಆ್ಯಂಕರ್ : ಬಟ್ಟೆ ತೊಳೆಯಲು ತೆರಳಿದ್ದ ವೇಳೆ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಎರೇಹಂಚಿನಾಳ ಗ್ರಾಮದ ಸರಹದ್ದಿನಲ್ಲಿ ನಡೆದಿದೆ.

ಮೃತರನ್ನು ಗದಗ ತಾಲೂಕಿನ ತಿಮ್ಮಾಪುರ ಗ್ರಾಮದ ನಿವಾಸಿಗಳಾದ ಲಕ್ಷ್ಮವ್ವ ಹರಣಸಿಕಾರಿ (15) ಹಾಗೂ ಮುತ್ತುವ್ವ ಹರಣಸಿಕಾರಿ (8) ಎಂದು ಗುರುತಿಸಲಾಗಿದೆ.

ತಿಮ್ಮಾಪುರ ಗ್ರಾಮದಲ್ಲಿನ ಕೆರೆ ಸಂಪೂರ್ಣ ಬತ್ತಿ ಹೋಗಿರುವ ಹಿನ್ನೆಲೆ ಗ್ರಾಮಸ್ಥರು ನೀರಿಗಾಗಿ ಪರದಾಟ ನಡೆಸುತ್ತಿದ್ದಾರೆ. ಇದೇ ಕಾರಣಕ್ಕೆ ಇಂದು ಮಧ್ಯಾಹ್ನ ಬಾಲಕಿಯರು ಬಟ್ಟೆ ತೊಳೆಯಲು ಕೊಪ್ಪಳ ಜಿಲ್ಲೆಯ ಎರೇಹಂಚಿನಾಳ ಗ್ರಾಮದ ಗಡಿಭಾಗದಲ್ಲಿರುವ ಕೃಷಿ ಹೊಂಡದ ಬಳಿ ತೆರಳಿದ್ದರು.

ಈ ವೇಳೆ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರಲ್ಲಿ ಆಕ್ರಂದನ ಮುಗಿಲುಮುಟ್ಟಿದ್ದು, ಕುಟುಂಬಸ್ಥರ ರೋದನ ಮನಕಲಕುವಂತಿತ್ತು. ಘಟನಾ ಸ್ಥಳಕ್ಕೆ ಕುಕನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ನೀರಿನ ಅಭಾವದಿಂದ ಗ್ರಾಮಸ್ಥರು ದೂರದ ಪ್ರದೇಶಗಳಿಗೆ ತೆರಳಿ ದೈನಂದಿನ ಕೆಲಸಗಳನ್ನು ನಿರ್ವಹಿಸಬೇಕಾದ ಪರಿಸ್ಥಿತಿ ಉಂಟಾಗಿದ್ದು, ಇದೇ ಸಮಸ್ಯೆ ಇದೀಗ ಎರಡು ಅಮಾಯಕ ಜೀವಗಳನ್ನು ಬಲಿ ಪಡೆದಿದೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬಂದಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande