
ಚಿತ್ರದುರ್ಗ, 19 ಮೇ (ಹಿ.ಸ.) :
ಆ್ಯಂಕರ್ : ಸೋಮವಾರ ರಾತ್ರಿ ಸುರಿದ ಮಳೆಯ ಪರಿಣಾಮವಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 12.7 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ತಾಲ್ಲೂಕುವಾರು ಮಳೆಯ ವಿವರದಲ್ಲಿ ಹೊಸದುರ್ಗ ತಾಲ್ಲೂಕಿನಲ್ಲಿ ಅತಿ ಹೆಚ್ಚು 26.5 ಮಿ.ಮೀ ಮಳೆಯಾಗಿದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ 11.7 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 10.4 ಮಿ.ಮೀ, ಹಿರಿಯೂರು ತಾಲ್ಲೂಕಿನಲ್ಲಿ 9.4 ಮಿ.ಮೀ, ಹೊಳಲ್ಕೆರೆ ತಾಲ್ಲೂಕಿನಲ್ಲಿ 8.5 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 5.8 ಮಿ.ಮೀ ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ
ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 19.9 ಮಿ.ಮೀ, ತಳಕಿನಲ್ಲಿ 12.7 ಮಿ.ಮೀ ಹಾಗೂ ಚಳ್ಳಕೆರೆಯಲ್ಲಿ 7.6 ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ ನಗರದಲ್ಲಿ 15.9 ಮಿ.ಮೀ, ಭರಮಸಾಗರದಲ್ಲಿ 9 ಮಿ.ಮೀ ಹಾಗೂ ತುರುವನೂರಿನಲ್ಲಿ 6.3 ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 14.4 ಮಿ.ಮೀ, ಐಮಂಗಲದಲ್ಲಿ 14.3 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗ ಪಟ್ಟಣದಲ್ಲಿ 50.1 ಮಿ.ಮೀ ಅತಿಹೆಚ್ಚು ಮಳೆಯಾಗಿದ್ದು, ಶ್ರೀರಾಂಪುರದಲ್ಲಿ 26.4 ಮಿ.ಮೀ ಹಾಗೂ ಮತ್ತೋಡಿನಲ್ಲಿ 18.1 ಮಿ.ಮೀ ಮಳೆಯಾಗಿದೆ.
ಮನೆ, ಬೆಳೆಗಳಿಗೆ ಹಾನಿ
ಮಳೆಯಿಂದಾಗಿ ಜಿಲ್ಲೆಯಾದ್ಯಂತ 26 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, ಒಂದು ಮನೆ ಸಂಪೂರ್ಣ ಕುಸಿದಿದೆ. ಮೂರು ಸಣ್ಣ ಜಾನುವಾರುಗಳು ಮೃತಪಟ್ಟಿದ್ದು, 20 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಐದು ಮನೆಗಳಿಗೆ ನೀರು ನುಗ್ಗಿರುವ ಪ್ರಕರಣಗಳು ವರದಿಯಾಗಿವೆ.
ಚಳ್ಳಕೆರೆ ತಾಲ್ಲೂಕಿನಲ್ಲಿ ಎರಡು ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಎರಡು ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟವಾಗಿದೆ.
ಹಿರಿಯೂರು ತಾಲ್ಲೂಕಿನಲ್ಲಿ ಮೂರು ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಒಂದು ಸಣ್ಣ ಜಾನುವಾರು ಸಾವನ್ನಪ್ಪಿದೆ. ಅಲ್ಲದೆ 15 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಹೊಸದುರ್ಗ ತಾಲ್ಲೂಕಿನಲ್ಲಿ ಒಂಬತ್ತು ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, 2.5 ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟವಾಗಿದೆ.
ಹೊಳಲ್ಕೆರೆ ತಾಲ್ಲೂಕಿನಲ್ಲಿ ಒಂದು ಮನೆ ಸಂಪೂರ್ಣ ಹಾನಿಯಾಗಿದ್ದು, ಆರು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಐದು ಮನೆಗಳಿಗೆ ನೀರು ನುಗ್ಗಿರುವ ಘಟನೆಗಳು ವರದಿಯಾಗಿವೆ.
ಮೊಳಕಾಲ್ಮುರು ತಾಲ್ಲೂಕಿನಲ್ಲಿ ಎರಡು ಸಣ್ಣ ಜಾನುವಾರುಗಳು ಮೃತಪಟ್ಟಿದ್ದು, ಆರು ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.