ದುಬಾರೆ ಸಾಕಾನೆ ಶಿಬಿರದಲ್ಲಿ ದುರಂತ ; ಕಾದಾಟದಲ್ಲಿ ಗಾಯಗೊಂಡಿದ್ದ ಆನೆ, ಮಾರ್ತಾಂಡ ಸಾವು
ಮಡಿಕೇರಿ, 19 ಮೇ (ಹಿ.ಸ.) : ಆ್ಯಂಕರ್ : ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ದುಬಾರೆ ಸಾಕಾನೆ ಶಿಬಿರದಲ್ಲಿ ಸೋಮವಾರ ನಡೆದ ಭೀಕರ ಆನೆಗಳ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ಉಂಟಾದ ಕಾದಾಟ ದ
ಕಾದಾಟ ನಡೆಸಿದ್ದ ಆನೆಗಳು


ಮಡಿಕೇರಿ, 19 ಮೇ (ಹಿ.ಸ.) :

ಆ್ಯಂಕರ್ : ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ದುಬಾರೆ ಸಾಕಾನೆ ಶಿಬಿರದಲ್ಲಿ ಸೋಮವಾರ ನಡೆದ ಭೀಕರ ಆನೆಗಳ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ಉಂಟಾದ ಕಾದಾಟ ದುಬಾರೆ ಶಿಬಿರದಲ್ಲಿ ಆತಂಕದ ವಾತಾವರಣ ಸೃಷ್ಟಿಸಿತ್ತು.

ಕಾದಾಟದ ವೇಳೆ ಕಂಜನ್ ಆನೆ, ಮಾರ್ತಾಂಡ ಆನೆಯ ಹೊಟ್ಟೆ, ಕಿವಿ ಸೇರಿದಂತೆ ದೇಹದ ಹಲವು ಭಾಗಗಳಿಗೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿತ್ತು. ಗಾಯಗೊಂಡಿದ್ದ ಮಾರ್ತಾಂಡ ಆನೆಗೆ ಶಿಬಿರದಲ್ಲೇ ಅರಣ್ಯ ಇಲಾಖೆಯ ವೈದ್ಯರಾದ ಡಾ. ಮುಜಿಭ್ ಮತ್ತು ಸಿಬ್ಬಂದಿ ಚಿಟ್ಟಿಯಪ್ಪ ಚಿಕಿತ್ಸೆ ನೀಡುತ್ತಿದ್ದರು. ಆದರೆ ಗಾಯಗಳ ತೀವ್ರತೆ ಹೆಚ್ಚಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ಆನೆ ಇಂದು ಮೃತಪಟ್ಟಿದೆ.

ಈ ದುರಂತದ ವೇಳೆ ಆನೆಗಳ ಕಾದಾಟವನ್ನು ನೋಡಲು ಬಂದಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಬಲಿಯಾಗಿದ್ದರು.

ಘಟನೆ ಬಳಿಕ ಸುರಕ್ಷತಾ ದೃಷ್ಟಿಯಿಂದ ದುಬಾರೆ ಸಾಕಾನೆ ಶಿಬಿರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಪ್ರವಾಸಿಗರಿಗೆ ಪ್ರವೇಶ ಇರುವುದಿಲ್ಲ ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande