ಮೇ 4ರಂದು ಕುಕನೂರಿನಲ್ಲಿ ಮಹನೀಯರ ಮೂರ್ತಿ ಪ್ರತಿಷ್ಠಾಪನೆ ಭೂಮಿ ಪೂಜಾ
ಕೊಪ್ಪಳ, 02 ಮೇ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾ ಆಡಳಿತದ ವತಿಯಿಂದ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿಯಲ್ಲಿ ಅನುಮೋದನೆಗೊಂಡಿರುವ ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಕುಕನೂರು ಪಟ್ಟಣದಲ
ಮೇ 4ರಂದು ಕುಕನೂರಿನಲ್ಲಿ ಮಹನೀಯರ ಮೂರ್ತಿ ಪ್ರತಿಷ್ಠಾಪನೆ ಭೂಮಿ ಪೂಜಾ


ಕೊಪ್ಪಳ, 02 ಮೇ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾ ಆಡಳಿತದ ವತಿಯಿಂದ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿಯಲ್ಲಿ ಅನುಮೋದನೆಗೊಂಡಿರುವ ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಕುಕನೂರು ಪಟ್ಟಣದಲ್ಲಿ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರು ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣ ರವರ ಮೂರ್ತಿ ಪ್ರತಿಷ್ಠಾಪನೆ ಕಾಮಗಾರಿಗಳ ಭೂಮಿ ಪೂಜಾ ಸಮಾರಂಭವನ್ನು ಮೇ 4ರ ಸೋಮವಾರ ಸಾಯಂಕಾಲ 5 ಗಂಟೆಗೆ ಕುಕನೂರ ಪಟ್ಟಣದ ಆಯ್ದ ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಂಡರಗಿ ಶ್ರೀ ಅನ್ನದಾನೀಶ್ವರ ಮಠದ ಶ್ರೀ ಮ.ನಿ.ಪ್ರ. ಜಗದ್ಗುರು ಡಾ. ನಾಡೋಜ ಅನ್ನದಾನೀಶ್ವರ ಮಹಾಶಿವಯೋಗಿಗಳು ಹಗೂ ಕೊಪ್ಪಳ ಸಂಸ್ಥಾನ ಗವಿಮಠದ ಶ್ರೀ ಮ.ನಿ.ಪ್ರ.ಸ್ವ. ಜಗದ್ಗುರು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರುಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಸರಕಾರದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ಉದ್ಘಾಟನೆ/ ಶಂಕುಸ್ಥಾಪನೆ ನೆರವೇರಿಸುವರು.

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಮತ್ತು ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಘನ ಉಪಸ್ಥಿತಿ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸದಸ್ಯರಾದ ಕೆ.ರಾಜಶೇಖರ್ ಬಸವರಾಜ ಹಿಟ್ನಾಳ, ಕರ್ನಾಟಕ ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ್, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪುರ ಹಾಗೂ ಹೇಮಲತಾ ನಾಯಕ, ಮುನಿರಾಬಾದ ತುಂಗಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್ಸಾಬ್ ನಬಿಸಾಬ ದೋಟಿಹಾಳ, ಕುಕನೂರು ಪಟ್ಟಣ ಪಂಚಾಯತ ಅಧ್ಯಕ್ಷರಾದ ಲೀಲಾವತಿ ಮುಧೋಳ, ಉಪಾಧ್ಯಕ್ಷರಾದ ಮಂಜುಳಾ ಕಲ್ಮನಿ ಹಾಗೂ ಪಟ್ಟಣ ಪಂಚಾಯತ ಸರ್ವ ಸದಸ್ಯರು ಪಾಲ್ಗೊಳ್ಳುವರು.

ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಲಾದ ಕೆ.ಪಿ.ಮೋಹನ್ರಾಜ್, ಕೊಪ್ಪಳ ಜಿಲ್ಲಾಧಿಕಾರಿಗಲಾದ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಲಾದ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್. ಎಲ್. ಅರಿಸಿದ್ದಿ, ಕೊಪ್ಪಳ ಜಿಲ್ಲಾ ಕೆ.ಡಿ.ಪಿ. ಸದಸ್ಯರಾದ ಹನುಮಂತಗೌಡ ಪಾಟೀಲ ಚಂಡೂರ, ಗ್ಯಾರಂಟಿ ಅನುಷ್ಠಾನ ಸಮಿತಿಯ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷರಾದ ಕಾಶಿಂಸಾಬ ತಳಕಲ್ ಹಾಗೂ ಕುಕನೂರ ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಸಂಗಪ್ಪ ವೀ. ಗುತ್ತಿ ಅವರು ಭಾಗವಹಿಸುವರು.

ಕಾರ್ಯಕ್ರಮದಲ್ಲಿ ಕುಕನೂರು ತಹಶೀಲ್ದಾರರಾದ ಬಸವರಾಜ ಬೆಣ್ಣಿಶಿರೂರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂತೋಷ ಬಿರಾದಾರ ಪಾಟೀಲ ಹಾಗೂ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳಾದ ನಾಗೇಶ ಅವರು ಉಪಸ್ಥಿತರಿರುವರು. ಕೊಪ್ಪಳದ ಕೆ.ಆರ್.ಐ.ಡಿ.ಎಲ್. ವತಿಯಿಂದ ಕುಕನೂರಿನಲ್ಲಿ ಮಹನೀಯರ ಮೂರ್ತಿ ಪ್ರತಿಷ್ಠಾಪನಾ ಕಾಮಗಾರಿಗಳ ಅನುಷ್ಠಾನ ಮಾಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande