ಕಾಂಗ್ರೆಸ್ ಗೆ ಸಂವಿಧಾನದ ಮೇಲೆ ಗೌರವವಿಲ್ಲ : ಪ್ರಹ್ಲಾದ ಜೋಶಿ
ದಾವಣಗೆರೆ, 02 ಮೇ (ಹಿ.ಸ.) : ಆ್ಯಂಕರ್ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಸಂವಿಧಾನದ ಪ್ರತಿಯನ್ನು ಹಿಡಿದು ‘ಸಂವಿಧಾನ ಉಳಿಸಿ’ ಎಂದು ನಾಟಕವಾಡುವ ಕಾಂಗ್ರೆಸ್ ನಾಯಕರಿಗೆ ವಾಸ್ತವದಲ್ಲಿ ಸಂವಿಧಾನದ ಮೇಲೆ ಕಿಂಚಿತ್ತೂ
ಕಾಂಗ್ರೆಸ್ ಗೆ ಸಂವಿಧಾನದ ಮೇಲೆ ಗೌರವವಿಲ್ಲ : ಪ್ರಹ್ಲಾದ ಜೋಶಿ


ದಾವಣಗೆರೆ, 02 ಮೇ (ಹಿ.ಸ.) :

ಆ್ಯಂಕರ್ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಸಂವಿಧಾನದ ಪ್ರತಿಯನ್ನು ಹಿಡಿದು ‘ಸಂವಿಧಾನ ಉಳಿಸಿ’ ಎಂದು ನಾಟಕವಾಡುವ ಕಾಂಗ್ರೆಸ್ ನಾಯಕರಿಗೆ ವಾಸ್ತವದಲ್ಲಿ ಸಂವಿಧಾನದ ಮೇಲೆ ಕಿಂಚಿತ್ತೂ ಗೌರವವಿಲ್ಲ” ಎಂದು ಅವರು ಆರೋಪಿಸಿದರು.

ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸಾಂವಿಧಾನಿಕ ಮೌಲ್ಯಗಳನ್ನು ಕಡೆಗಣಿಸಿ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ ಎಂದು ಜೋಶಿ ಟೀಕಿಸಿದರು. “ಕೇವಲ ಮುಸ್ಲಿಂ ಕಾಲೋನಿಗಳ ಅಭಿವೃದ್ಧಿಗೆ ₹600 ಕೋಟಿ ಮೀಸಲಿಟ್ಟು, ಕಾಂಗ್ರೆಸ್ ತನ್ನ ಮತಬ್ಯಾಂಕ್ ರಾಜಕಾರಣ ನಡೆಸುತ್ತಿದೆ. ಇದರಿಂದ SC, ST ಹಾಗೂ OBC ಸಮುದಾಯಗಳ ಹಕ್ಕುಗಳನ್ನು ಲೂಟಿ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಕಡೆಗಣಿಸಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪವನ್ನೂ ಅವರು ಮಾಡಿದರು. “ಸರ್ಕಾರ ಎಂದರೆ ಸಮಾಜದ ಎಲ್ಲಾ ವರ್ಗಗಳನ್ನೂ ಸಮಾನವಾಗಿ ಕಾಣಬೇಕು. ಆದರೆ ರಾಜ್ಯ ಸರ್ಕಾರ ಒಂದು ವರ್ಗದ ಪರವಾಗಿ ಮಾತ್ರ ನಿಂತಿರುವುದು ಖಂಡನೀಯ” ಎಂದು ಅವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande