ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ, ಪಾಲಿಕೆ ಚುನಾವಣೆ ಕುರಿತು ಕಾಂಗ್ರೆಸ್ ಸಭೆ
ಬೆಂಗಳೂರು, 02 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಶೀಘ್ರದಲ್ಲೇ ಆರಂಭವಾಗಲಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಜಿಬಿಎ ವ್ಯಾಪ್ತಿಯ ಪಾಲಿಕೆ ಚುನಾವಣೆಯ ಹಿನ್ನೆಲೆಯಲ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ. ಸಿ. ಚಂದ್ರಶೇಖರ್ ಅವರು ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಬೆಂಗಳೂರು
Meeting


ಬೆಂಗಳೂರು, 02 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಶೀಘ್ರದಲ್ಲೇ ಆರಂಭವಾಗಲಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಜಿಬಿಎ ವ್ಯಾಪ್ತಿಯ ಪಾಲಿಕೆ ಚುನಾವಣೆಯ ಹಿನ್ನೆಲೆಯಲ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ. ಸಿ. ಚಂದ್ರಶೇಖರ್ ಅವರು ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ಬೆಂಗಳೂರು ಉಸ್ತುವಾರಿ ಮುಖಂಡರು ಹಾಗೂ ಪಕ್ಷದ ವಿವಿಧ ಪಧಾದಿಕಾರಿಗಳು ಭಾಗವಹಿಸಿ, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಮತ್ತು ಮುಂಬರುವ ಪಾಲಿಕೆ ಚುನಾವಣೆಗೆ ಸಂಬಂಧಿಸಿದ ತಯಾರಿ ಕುರಿತು ಚರ್ಚಿಸಿದರು.

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವುದು ಹಾಗೂ ಅರ್ಹ ಮತದಾರರನ್ನು ಸೇರಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕೆಂದು ಸೂಚನೆ ನೀಡಲಾಯಿತು. ಜೊತೆಗೆ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಸಂಘಟನೆ ಬಲಪಡಿಸುವ ಕುರಿತು ಮಾರ್ಗಸೂಚಿಗಳು ನೀಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande