
ಕೊಪ್ಪಳ, 02 ಮೇ (ಹಿ.ಸ.) :
ಆ್ಯಂಕರ್ : ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ (ರಿ) ವತಿಯಿಂದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ 31 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ತರಬೇತಿಯನ್ನು ಆಯೋಜಿಸಲಾಗಿದೆ.
ಮೇ ತಿಂಗಳ ಕೊನೆಯ ವಾರದಲ್ಲಿ ಈ ತರಬೇತಿ ಆರಂಭವಾಗಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಗಳು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.
ತರಬೇತಿ ಪೂರ್ಣಗೊಂಡ ನಂತರ ಸಾಲ ಸೌಲಭ್ಯ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ. ಇದರಿಂದ ಸ್ವಂತ ಉದ್ಯೋಗ ಆರಂಭಿಸಲು ಅನುಕೂಲವಾಗುತ್ತದೆ.
ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 45 ವಯಸ್ಸಿನ ಒಳಗಿರುವ ಗ್ರಾಮೀಣ ಭಾಗದ ನಿರುದ್ಯೋಗಿ ಅಭ್ಯರ್ಥಿಗಳು ಭಾಗವಹಿಸಲು ಅವಕಾಶವಿದೆ.
ಈ ತರಬೇತಿಯಲ್ಲಿ ಮೊಬೈಲ್ ಫೋನ್ಗಳ ಮೂಲಭೂತ ಜ್ಞಾನ, ಹಾರ್ಡ್ವೇರ್ ಮತ್ತು ಸಾಫ್ಟ್ವೇರ್ ರಿಪೇರಿ, ದೋಷ ಪತ್ತೆ (ಟ್ರಬಲ್ಶೂಟಿಂಗ್), ಉಪಕರಣಗಳ ಬಳಕೆ ಹಾಗೂ ಗ್ರಾಹಕ ಸೇವಾ ಕೌಶಲ್ಯಗಳು ಮತ್ತು ಸಣ್ಣ ಉದ್ಯಮ ಆರಂಭಿಸುವ ವಿಧಾನಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಬಿಳಿ ಹಾಳೆಯ ಮೇಲೆ ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು ಅದನ್ನು ಫೋಟೋ ತೆಗೆದು ವಾಟ್ಸಪ್ ಮಾಡಬಹುದು ಅಥವಾ ಕರೆ ಮಾಡಿ ಹೆಸರು ನೋಂದಣಿ ಮಾಡಿಕೊಳ್ಳಬಹುದು. ಅಥವಾ www.rsetihaliyal.org ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ CBD RSETI Haliyal ವಾಟ್ಸಪ್ ಚಾನಲ್ ನಲ್ಲಿರುವ ಲಿಂಕ್ https://forms.gle/m4pcmpritDevbwug9 ಮೂಲಕ ಅರ್ಜಿ ಸಲ್ಲಿಸಬಹುದು. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.
ತರಬೇತಿಯಲ್ಲಿ ಭಾಗವಹಿಸಲಿಚ್ಛಿಸುವವರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಅಥವಾ ಮೊ.ಸಂ: 8970145354, 9483485489 ಗೆ ಸಂಪರ್ಕಿಸುವ0ತೆ ಸಂಸ್ಥೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್