
ಕೊಪ್ಪಳ, 02 ಮೇ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯ ದದೇಗಲ್ನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗಾಗಿ ಡಿಪ್ಲೋಮಾ ಕೋರ್ಸುಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ/ಪಿಯುಸಿ/ಐಟಿಐ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ 3+1 ವರ್ಷ ಅವಧಿಯ ಡಿಪ್ಲೋಮಾ ಕೋರ್ಸಗಳಾದ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕ್ಯಾಟ್ರಾನಿಕ್ಸ್ ಹಾಗೂ ಡಿಪ್ಲೋಮಾ ಇನ್ ಎಲೆಕ್ಟಾçನಿಕ್ಸ್ & ಕಮ್ಯೂನಿಕೇಶನ್ ಕೋರ್ಸುಗಳಿಗೆ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು http://gttc-hrms.karnataka.gov.in/admission ಮೂಲಕ ಮೇ 10 ರೊಳಗಾಗಿ ಆನ್ಲೈನ್ ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ, ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಗದಗ ರಸ್ತೆ, ದದೇಗಲ್, ಕೊಪ್ಪಳ ಇಲ್ಲಿ ಖುದ್ದಾಗಿ ಭೇಟಿ ನೀಡಿ ಸಹ ಮಾಹಿತಿಯನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯ ಅಥವಾ ಮೌನೇಶ್ ರಾಥೋಡ್, ವಿಭಾಗದ ಮುಖ್ಯಸ್ಥರು, ಜಿಟಿಟಿಸಿ ದದೇಗಲ್, ಕೊಪ್ಪಳ ಇವರನ್ನು ದೂರವಾಣಿ ಸಂಖ್ಯೆ 7507094445, 9986088894 ಇವರನ್ನು ಸಂಪರ್ಕಿಸಬಹುದು ಜಿಟಿಟಿಸಿ ಪ್ರಾಚಾರ್ಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್