ಕೊಪ್ಪಳ : ನಾಳೆ ಸಣ್ಣ ನೀರಾವರಿ ಸಚಿವರ ಪ್ರವಾಸ
ಕೊಪ್ಪಳ, 02 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ವಿಧಾನ ಪರಿಷತ್ತಿನ ಸಭಾ ನಾಯಕರು ಆಗಿರುವ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ನಾಳೆ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ನಾಳೆ ಬೆಳಿಗ್ಗೆ 6 ಗಂಟೆ
ಕೊಪ್ಪಳ ಸಣ್ಣ ನೀರಾವರಿ ಸಚಿವರ ಪ್ರವಾಸ ಮೇ 3ಕ್ಕೆ


ಕೊಪ್ಪಳ, 02 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ವಿಧಾನ ಪರಿಷತ್ತಿನ ಸಭಾ ನಾಯಕರು ಆಗಿರುವ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ನಾಳೆ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಸಚಿವರು ನಾಳೆ ಬೆಳಿಗ್ಗೆ 6 ಗಂಟೆಗೆ ರಾಯಚೂರಿನಿಂದ (ರಸ್ತೆ ಮೂಲಕ ಮಾನವಿ, ಸಿಂಧನೂರು, ಗಂಗಾವತಿ ಮಾರ್ಗವಾಗಿ) ನಿರ್ಗಮಿಸಿ ಬೆಳಿಗ್ಗೆ 9 ಗಂಟೆಗೆ ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾಶಯಕ್ಕೆ ಆಗಮಿಸುವರು. 9.30ಕ್ಕೆ ಉಪ ಮುಖ್ಯಮಂತ್ರಿಗಳೊಂದಿಗೆ ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ಅಳವಡಿಸುವ ಕಾಮಗಾರಿಯ ಪರಿವೀಕ್ಷಣೆ ಮಾಡುವರು.

ನಂತರ 11.30ಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಆವರಣದಲ್ಲಿನ ಹೆಲಿಪ್ಯಾಡ್ ದಿಂದ ಡಿಸಿಎಂ ಅವರೊಂದಿಗೆ ವಿಟಿ-ಬಿಜಿಎಂ ಹೆಲಿಕಾಪ್ಟರ್ ಮೂಲಕ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande