
ವಿಜಯಪುರ, 02 ಮೇ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತಾಲ್ಲೂಕಾ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪಟ್ಟಣ ಪಂಚಾಯತ್ ಕಟ್ಟಡಗಳನ್ನು ಇಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಂ.ಬಿ. ಪಾಟೀಲರೊಂದಿಗೆ ಸಂಯುಕ್ತವಾಗಿ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನತೆಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಹೊಸದಾಗಿ ನಿರ್ಮಾಣಗೊಂಡ ಈ ಕೇಂದ್ರದಿಂದ ಸುತ್ತಮುತ್ತಲಿನ ಗ್ರಾಮಗಳ ಜನತೆಗೆ ತ್ವರಿತ ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆಗಳು ಲಭ್ಯವಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನೊಂದೆಡೆ, ಪಟ್ಟಣ ಪಂಚಾಯತ್ ಕಟ್ಟಡ ಉದ್ಘಾಟನೆಯಿಂದ ಸ್ಥಳೀಯ ಆಡಳಿತ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಲಿದ್ದು, ಸಾರ್ವಜನಿಕರಿಗೆ ಅಗತ್ಯ ಸೇವೆಗಳು ಸುಲಭವಾಗಿ ದೊರೆಯುವಂತಾಗುತ್ತದೆ ಎಂದು ತಿಳಿಸಿದರು. ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯಬೇಕಿದ್ದು, ಜನಸಹಕಾರದೊಂದಿಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲ್ಲೂಕಾ ಮಟ್ಟದ ಅಧಿಕಾರಿಗಳು, ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು, ಹಿರಿಯರು, ತಾಯಂದಿರು ಮತ್ತು ಯುವಕರು ಉಪಸ್ಥಿತರಿದ್ದು, ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande