
ಹಾವೇರಿ, 02 ಮೇ (ಹಿ.ಸ.) :
ಆ್ಯಂಕರ್ : ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರು ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ನಾನಾ ಕಂದಾಯ ಗ್ರಾಮಗಳು ಹಾಗೂ ಉಪಗ್ರಾಮಗಳ 822 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವದ ಹಕ್ಕುಪತ್ರಗಳನ್ನು ಶಾಸಕ ಶ್ರೀನಿವಾಸ ಮಾನೆ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಲವು ಕುಟುಂಬಗಳಿಗೆ ಮನೆಗಳಿದ್ದರೂ ಮಾಲಿಕತ್ವದ ಹಕ್ಕು ಇರಲಿಲ್ಲ. ಇದರ ಪರಿಣಾಮವಾಗಿ ಮೂಲಭೂತ ಸೌಲಭ್ಯಗಳನ್ನು ಪಡೆಯಲು ಅಡಚಣೆ ಉಂಟಾಗುತ್ತಿತ್ತು. ಈಗ ಎರಡು-ಮೂರು ತಲೆಮಾರುಗಳಿಂದ ಮುಂದುವರಿದ ಅತಂತ್ರತೆಗೆ ಅಂತ್ಯ ಸಿಕ್ಕಿದೆ ಎಂದು ತಿಳಿಸಿದರು.
ತಾಲೂಕಿನಾದ್ಯಂತ 13 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ ಹಕ್ಕು ನೀಡುವ ಮಹತ್ವದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa