ಸಿಬ್ಬಂದಿ ನೇಮಕಾತಿ ಆಯೋಗ ; ನಾನಾ ಹುದ್ದೆಗಳಿಗೆ ಅರ್ಜಿ ಆಹ್ವಾನ
ನಾನಾ
ಸಿಬ್ಬಂದಿ ನೇಮಕಾತಿ ಆಯೋಗ ; ನಾನಾ ಹುದ್ದೆಗಳಿಗೆ ಅರ್ಜಿ ಆಹ್ವಾನ


ಚಿತ್ರದುರ್ಗ, 02 ಮೇ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಮೇ.4 ಅರ್ಜಿ ಸಲ್ಲಿಸಲು ಕೊನೆಯ ದಿನ.

ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್, ಪಿಯುಸಿ, ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ ಪದವಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಎಸ್.ಸಿ/ಎಸ್.ಟಿ/ಒ.ಬಿ.ಸಿ/ಇ.ಎಸ್.ಎಮ್ ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಪರೀಕ್ಷೆಯ ಸಂಭವನೀಯ ದಿನಾಂಕ ಜೂನ್-2026 ಆಗಿದ್ದು, ನಿಖರ ದಿನಾಂಕವನ್ನು ಎಸ್ಎಸ್ಸಿ ವೆಬ್ಸೈಟ್ ಮೂಲಕ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಎಸ್ಎಸ್ಸಿ ವೆಬ್ಸೈಟ್ www.ssckkr.kar.nic.in/https://ssc.nic.in ಗೆ ಭೇಟಿ ನೀಡಬಹುದು ಹಾಗೂ ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520 ಅಥವಾ ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande