ಕೊಪ್ಪಳ : ಬಿಸಿಲಿನ ಪ್ರಖರತೆ ಹಾಗೂ ತೀವ್ರತೆ - ಸಲಹೆಗಳು
ಕೊಪ್ಪಳ, 02 ಮೇ (ಹಿ.ಸ.) : ಆ್ಯಂಕರ್ : ಜಿಲ್ಲೆಯಾದ್ಯಂತ ಪ್ರಸ್ತುತ ತಿಂಗಳಿನಿ0ದ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಕಂಡುಬ0ದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್
ಕೊಪ್ಪಳ : ಬಿಸಿಲಿನ ಪ್ರಖರತೆ ಹಾಗೂ ತೀವ್ರತೆ - ಸಲಹೆಗಳು


ಕೊಪ್ಪಳ, 02 ಮೇ (ಹಿ.ಸ.) :

ಆ್ಯಂಕರ್ : ಜಿಲ್ಲೆಯಾದ್ಯಂತ ಪ್ರಸ್ತುತ ತಿಂಗಳಿನಿ0ದ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಕಂಡುಬ0ದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕರಿಗೆ ಸಲಹೆಗಳನ್ನು ನೀಡಿದೆ.

ಬೇಸಿಗೆ ಸಮಯದಲ್ಲಿ ಹೆಚ್ಚು ನೀರನ್ನು ಕುಡಿಯಬೇಕು. ಮಜ್ಜಿಗೆ ಅಥವಾ ಎಳನೀರು, ಹಣ್ಣಿನ ರಸವನ್ನು ಹೆಚ್ಚಾಗಿ ಸೇವಿಸಬೇಕು. ನೀರಿನ ಅಂಶ ಹೆಚ್ಚಾಗಿರುವ ತರಕಾರಿಗಳು, ಹಣ್ಣುಗಳನ್ನು ಸೇವಿಸುವುದು ಉತ್ತಮ. ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಬೇಕು ಹಾಗೂ ಗಾಳಿಯಾಡುವ ಪಾದರಕ್ಷೆ ಧರಿಸಬೇಕು. ಹೊರಗಡೆ ತೆರಳುವ ವೇಳೆ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮಗಳನ್ನು ಪಾಲಿಸಬೇಕು. ರೇಡಿಯೊ, ದೂರದರ್ಶನ ಹಾಗೂ ದಿನಪತ್ರಿಕೆಗಳಲ್ಲಿ ಬಿಸಿಯಾದ ಗಾಳಿ ಅಥವಾ ಶಾಖ ತರಂಗ(ಹೀಟ್ ವೇವ್)ದ ಬಗ್ಗೆ ನೀಡುವ ಮಾಹಿತಿ ಅನುಸಾರ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಬೇಕು.

ಬಿಸಿಲಿನಲ್ಲಿ ಹೊರಗಡೆ ಕಾರ್ಯನಿರ್ವಹಿಸುವವರು (ಜಮೀನು ಕೆಲಸ, ರಸ್ತೆ ಕಾಮಗಾರಿ ಮುಂತಾದವು) ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಮತ್ತು ಸಂಜೆ 4 ಗಂಟೆ ನಂತರ ಕೈಗೊಳ್ಳುವುದು ಉತ್ತಮ. ಈ ಅವಧಿಯಲ್ಲಿ ಶ್ರಮದಾಯಕ ಕೆಲಸಗಳಿಂದ ವಿಶ್ರಾಂತಿ ಪಡೆಯಬೇಕು. ಬಿಸಿಲಿನಲ್ಲಿ ನಡೆಯುವಾಗ ಕಡ್ಡಾಯವಾಗಿ ಚಪ್ಪಲಿ ಧರಿಸಿ. ಟೀ ಅಥವಾ ಕಾಫಿ, ಹೆಚ್ಚು ಸಕ್ಕರೆ ಅಂಶವನ್ನು ಹೊಂದಿರುವ ಕಾರ್ಬೋನೇಟೆಡ್ ಪಾನೀಯ ಹಾಗೂ ಮದ್ಯಪಾನದಿಂದ ದೂರವಿರಿ.

ವ್ಯಕ್ತಿ ತೊದಲು ಮಾತು ಅಥವಾ ಅರ್ಥ ರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿ. ಪ್ರಜ್ಞೆ ತಪ್ಪಿದರೆ ತಕ್ಷಣ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಿ, ಒದ್ದೆ ಬಟ್ಟೆಯಿಂದ ಮೈ ಒರೆಸಿ ಮತ್ತು ವೈದ್ಯರನ್ನು ಸಂಪರ್ಕಿಸಿ. ಹೊರಾಂಗಣ ಕಾರ್ಯಕ್ರಮಗಳನ್ನು ಸಾಧ್ಯವಾದಷ್ಟು ಬೆಳಗ್ಗೆ ಅಥವಾ ಸಂಜೆ ಆಯೋಜಿಸಿ, ಜನರಿಗೆ ನೆರಳು ಮತ್ತು ನೀರಿನ ವ್ಯವಸ್ಥೆ ಕಲ್ಪಿಸಿ. ಸಾಕು ಪ್ರಾಣಿಗಳನ್ನು ನೆರಳಿನಲ್ಲಿರಿಸಿ. ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಿ.

ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕು ಪ್ರಾಣಿಗಳನ್ನು ಒಬ್ಬರೇ ಬಿಟ್ಟು ಹೋಗಬೇಡಿ. ಕೆರೆ, ಬಾವಿ, ಕಾಲುವೆಗಳ ಹತ್ತಿರ ಮಕ್ಕಳು ಹೋಗದಂತೆ ನೋಡಿಕೊಳ್ಳಿ. ಬಿಸಿಗಾಳಿ ಮತ್ತು ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಅಥವಾ 108 ಅಥವಾ 102 ಕ್ಕೆ ಕರೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande