ರಾಜ್ಯದಾದ್ಯಂತ ಬಿಸಿಲು, ಗುಡುಗು ಮಳೆ ಮುನ್ಸೂಚನೆ
ಬೆಂಗಳೂರು, 02 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಾದ್ಯಂತ ಇಂದು ಸಾಮಾನ್ಯವಾಗಿ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಬೆಳಗಿನ ಸಮಯದಲ್ಲಿ ತಾಪಮಾನ ಏರಿಕೆಯಾಗಿದ್ದು, ಮಧ್ಯಾಹ್ನದ ನಂತರ ಹಲವೆಡೆ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಹವಾಮಾನ ಇಲಾಖೆ ಮುನ್ಸೂಚನೆಯ
ರಾಜ್ಯದಾದ್ಯಂತ ಬಿಸಿಲು, ಗುಡುಗು ಮಳೆ ಮುನ್ಸೂಚನೆ


ಬೆಂಗಳೂರು, 02 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದು ಸಾಮಾನ್ಯವಾಗಿ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಬೆಳಗಿನ ಸಮಯದಲ್ಲಿ ತಾಪಮಾನ ಏರಿಕೆಯಾಗಿದ್ದು, ಮಧ್ಯಾಹ್ನದ ನಂತರ ಹಲವೆಡೆ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು–ಸಿಡಿಲಿನೊಂದಿಗೆ ಜೋರಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ.

ಜನರು ವಿಶೇಷವಾಗಿ ಮಧ್ಯಾಹ್ನ ಹಾಗೂ ಸಂಜೆ ವೇಳೆಯಲ್ಲಿ ಹೊರಗಡೆ ಸಂಚರಿಸುವಾಗ ಎಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ. ರೈತರು ಹಾಗೂ ಸಾರ್ವಜನಿಕರು ಹವಾಮಾನ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande