ಯುಜಿ ನೀಟ್ ಪರೀಕ್ಷೆ, ಮಾಧ್ಯಮ ಪ್ರವೇಶ ನಿಷೇಧ
ಕೊಪ್ಪಳ, 02 ಮೇ (ಹಿ.ಸ.) : ಆ್ಯಂಕರ್ : ಯುಜಿ ನೀಟ್ 2026 ಪರೀಕ್ಷೆಯು ಮೇ 3 ರಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ನವದೆಹಲಿಯ ರಾಷ್ಟಿçÃಯ ಪರೀಕ್ಷಾ ಏಜೆನ್ಸಿ ಇವರ ನಿರ್ದೇಶನದನ್ವಯ ಪರೀಕ್ಷಾ ಕೇಂದ್ರಗಳಲ್ಲಿ ಪತ್ರಿಕಾ ಮತ್ತು ಮಾಧ್ಯಮ ಸಿಬ
ಯುಜಿ ನೀಟ್ ಪರೀಕ್ಷೆ, ಮಾಧ್ಯಮ ಪ್ರವೇಶ ನಿಷೇಧ


ಕೊಪ್ಪಳ, 02 ಮೇ (ಹಿ.ಸ.) :

ಆ್ಯಂಕರ್ : ಯುಜಿ ನೀಟ್ 2026 ಪರೀಕ್ಷೆಯು ಮೇ 3 ರಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ನವದೆಹಲಿಯ ರಾಷ್ಟಿçÃಯ ಪರೀಕ್ಷಾ ಏಜೆನ್ಸಿ ಇವರ ನಿರ್ದೇಶನದನ್ವಯ ಪರೀಕ್ಷಾ ಕೇಂದ್ರಗಳಲ್ಲಿ ಪತ್ರಿಕಾ ಮತ್ತು ಮಾಧ್ಯಮ ಸಿಬ್ಬಂದಿಗಳು ಪ್ರವೇಶಿಸುವುದನ್ನು ಹಾಗೂ ಸಂದರ್ಶನಗಳನ್ನು ಮತ್ತು ಹೇಳಿಕೆಗಳನ್ನು ನೀಡದಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಸುರೇಶ್. ಬಿ. ಇಟ್ನಾಳ್ ಅವರು ಆದೇಶ ಹೊರಡಿಸಿದ್ದಾರೆ.

ಕೊಪ್ಪಳದ ಗವಿಸಿದ್ಧೇಶ್ವರ ಪದವಿ ಪೂರ್ವ/ಪದವಿ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಬಹದ್ದೂರಬಂಡಿಯ ಪಿ.ಎಂ ಶ್ರೀ ಕೇಂದ್ರೀಯ ವಿದ್ಯಾಲಯ, ಕೊಪ್ಪಳದ ಕಾಳಿದಾಸ ಪ್ರೌಢಶಾಲೆ, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಭಾಗ್ಯನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ದದೇಗಲ್ನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ತಳಕಲ್ನ ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಸೇರಿದಂತೆ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಪತ್ರಿಕಾ ಹಾಗೂ ಮಾಧ್ಯಮದವರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande