
ಮೈಸೂರು, 02 ಮೇ (ಹಿ.ಸ.) :
ಆ್ಯಂಕರ್ : ಸುತ್ತೂರು ಶ್ರೀಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಭೇಟಿ ನೀಡಿ, ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ “ಅಭಿಮಾನೋತ್ಸವ” ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಮೈಸೂರು ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ, ಮೈಸೂರು ಗ್ರಾಮೀಣ ಜಿಲ್ಲಾಧ್ಯಕ್ಷ ಕೆ.ಎನ್. ಸುಬ್ಬಣ್ಣ, ಮಾಜಿ ಶಾಸಕ ನಿರಂಜನ್ ಕುಮಾರ್ ಹಾಗೂ ಮುಖಂಡ ಎಲ್.ಆರ್. ಮಹದೇವಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa