
ಕೊಪ್ಪಳ, 20 ಮೇ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇಸಾಲಿನ ಕೊಪ್ಪಳ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದಾರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸಿ, ಪರೀಕ್ಷೆಯಲ್ಲಿ ಹಾಜರಾದ ವಿದ್ಯಾರ್ಥಿ, ವಿದಾರ್ಥಿನಿಯರು ಪಡೆದ ಅಂಕಗಳ ಮಾಹಿತಿಗಾಗಿ ಉಪನಿರ್ದೇಶಕರು ಕಛೇರಿ ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಮತ್ತು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ, ಯಲಬುರ್ಗಾ, ಗಂಗಾವತಿ, ಕುಷ್ಟಗಿ ಹಾಗೂ ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಕುಷ್ಟಗಿ, ಗಂಗಾವತಿ ಇವರ ಕಛೇರಿಯನ್ನು ಸಂಪರ್ಕಿಸಬುಹುದಾಗಿದೆ ಹಾಗೂ ವಿದ್ಯಾರ್ಥಿಗಳ ಪೋಷಕರಿಗೆ ಆಕ್ಷೇಪಣೆ ಇದ್ದಲ್ಲಿ ಮೇ 22 ರೊಳಗಾಗಿ ಆಕ್ಷೇಪಣೆ ಸಲ್ಲಿಸಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್