
ಗದಗ, 20 ಮೇ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಅಂಗ ಸಂಸ್ಥೆಗಳ ಸಹಯೋಗದಲ್ಲಿ 8ನೇ ವರ್ಷದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕಲಿಕಾ ಸಾಮಗ್ರಿಗಳ ವಿತರಣೆ, “ವಿಶ್ವಕರ್ಮ ನೌಕರಶ್ರೀ” ಮತ್ತು “ವಿಶ್ವಕರ್ಮ ಸಾಧಕಶ್ರೀ” ಪ್ರಶಸ್ತಿ ಪ್ರದಾನ ಹಾಗೂ ಸಂಘದ ಸದಸ್ಯ ನಿವೃತ್ತ ನೌಕರ ದಂಪತಿಗಳಿಗೆ ಸನ್ಮಾನ ಸಮಾರಂಭವನ್ನು ಇದೇ ತಿಂಗಳ 24ರಂದು ಭಾನುವಾರ ಬೆಳಿಗ್ಗೆ 9.30ಕ್ಕೆ ನಗರದ ಗಂಗಿಮಡಿ ಕ್ರಾಸ್ನ ವಿಜಯನಗರ ಬಡಾವಣೆಯಲ್ಲಿರುವ ಶ್ರೀ ವಿಶ್ವಕರ್ಮ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಗೋಪಾಲ ಡಿ. ಕಡ್ಲಿಕೊಪ್ಪ ತಿಳಿಸಿದ್ದಾರೆ.
ನಗರದ ಶ್ರೀ ವಿಶ್ವಕರ್ಮ ಭವನದಲ್ಲಿಂದು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರೋತ್ಸಾಹ ಹಾಗೂ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸುವ ಉದ್ದೇಶದಿಂದ ಕಳೆದ ಎಂಟು ವರ್ಷಗಳಿಂದ ಸಂಘವು ನಿರಂತರವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸುತ್ತಿದೆ. ಸಮಾಜದ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಉನ್ನತ ಸಾಧನೆ ಮಾಡಬೇಕು ಎಂಬ ಆಶಯದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಶಿರೋಳ ಯಚ್ಚರಸ್ವಾಮಿಗಳ ಸಂಸ್ಥಾನ ಗವಿಮಠದ ಶ್ರೀ ಅಭಿನವ ಯಚ್ಚರ ಮಹಾಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಉದ್ಘಾಟಿಸಲಿದ್ದಾರೆ. ಗದಗ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಗೋಪಾಲ ಡಿ. ಕಡ್ಲಿಕೊಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕ ಕೆ.ಡಿ. ಬಡಿಗೇರ, ಧಾರವಾಡ ಜಿಲ್ಲಾ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕಾಳಪ್ಪ ವ್ಹಿ. ಬಡಿಗೇರ, ರಾಯಚೂರು ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಾ. ಮೋಹನ ವಾಯ್. ಪತ್ತಾರ, ಧಾರವಾಡ ಜಿಲ್ಲಾ ಸಂಘದ ಅಧ್ಯಕ್ಷ ವಿಠ್ಠಲ ಜಿ. ಕಮ್ಮಾರ, ಹಾವೇರಿ ಜಿಲ್ಲಾ ಸಂಘದ ಅಧ್ಯಕ್ಷ ಈರಪ್ಪ ಶ. ಪಂಚಾನನ, ಬಾಗಲಕೋಟ ತಾಲೂಕು ಸಂಘದ ಅಧ್ಯಕ್ಷ ದೇವೇಂದ್ರಪ್ಪ ಮ. ಅಗಲತಕಟ್ಟಿ, ರಾಯಚೂರು ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ರಾಮು ಗಾಣದಾಳ, ಕೊಪ್ಪಳ ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ದೇವೇಂದ್ರಪ್ಪ ಎಚ್. ಬಡಿಗೇರ, ಕೊಪ್ಪಳ ಜಿಲ್ಲಾ ಸಂಘದ ನಿರ್ದೇಶಕ ಹಾಗೂ ವಿಶ್ವಕರ್ಮ ಸಮಾಜದ ಕಾಯಾಧ್ಯಕ್ಷ ರುದ್ರಪ್ಪ ಕೆ. ಬಡಿಗೇರ ಮತ್ತು ಶಹಪೂರ ತಾಲೂಕು ಸಂಘದ ಅಧ್ಯಕ್ಷ ಮೌನೇಶ ಕೆಂಭಾವಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಮಾರಂಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಜೊತೆಗೆ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ ಕೂಡ ನಡೆಯಲಿದೆ. ವಿವಿಧ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿದವರಿಗೆ “ವಿಶ್ವಕರ್ಮ ನೌಕರಶ್ರೀ” ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಗಮನಾರ್ಹ ಸಾಧನೆ ಮಾಡಿದವರಿಗೆ “ವಿಶ್ವಕರ್ಮ ಸಾಧಕಶ್ರೀ” ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಸಂಘದ ಸದಸ್ಯರಾಗಿರುವ ನಿವೃತ್ತ ನೌಕರ ದಂಪತಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು.
ವಿಶ್ವಕರ್ಮ ಸಮಾಜದ ಏಕತೆ, ಸಂಘಟನೆ ಮತ್ತು ಶೈಕ್ಷಣಿಕ ಪ್ರಗತಿಗೆ ಇಂತಹ ಕಾರ್ಯಕ್ರಮಗಳು ಪೂರಕವಾಗಿವೆ. ಸಮಾಜದ ಯುವ ಪೀಳಿಗೆಗೆ ಪ್ರೇರಣೆ ನೀಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.
ಜಿಲ್ಲೆಯ ಸಮಸ್ತ ವಿಶ್ವಕರ್ಮ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಂಘದ ಮುಖಂಡರು ಮನವಿ ಮಾಡಿದರು.
ಪೂರ್ವಸಿದ್ಧತಾ ಸಭೆಯಲ್ಲಿ ಡಾ. ಸಿ.ವಿ. ಬಡಿಗೇರ, ವಿಶ್ವನಾಥ ಯ. ಕಮ್ಮಾರ, ಶ್ರೀಧರ ಕೊಣ್ಣೂರ, ಮೌನೇಶ ಸಿ. ಬಡಿಗೇರ (ನರೇಗಲ್ಲ), ಮಹೇಶ ಕಮ್ಮಾರ, ವಿಶ್ವನಾಥ ರಾಜನಾಳ, ಸುಮಂಗಲಾ ಪತ್ತಾರ, ಶಂಕರ ಪತ್ತಾರ, ಆನಂದ ಕಮ್ಮಾರ, ನಾಗರಾಜ ಕಮ್ಮಾರ, ಶಂಕರ ಕಂಚಗಾರ, ಗೋಪಾಲ ಬಡಿಗೇರ, ಕುಮಾರ ಬಡಿಗೇರ, ಪ್ರಕಾಶ ಬಡಿಗೇರ, ಈರಣ್ಣ ಬಡಿಗೇರ, ವಿಶ್ವನಾಥ ಪತ್ತಾರ, ಮಧುಸೂದನ ವಿಶ್ವಕರ್ಮ ಸೇರಿದಂತೆ ಸಮಾಜದ ಅನೇಕ ಮುಖಂಡರು ಹಾಗೂ ಸದಸ್ಯರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP