
ಮೈಸೂರು, 20 ಮೇ (ಹಿ.ಸ.) :
ಆ್ಯಂಕರ್ : ಮೈಸೂರು ಜಿಲ್ಲೆಯ ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಮಾದಕ ವ್ಯಸನ ಮುಕ್ತ ಭಾರತ” ಅಭಿಯಾನದ ಅಂಗವಾಗಿ ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಅಭಿಯಾನದ ವೇಳೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಯುವಜನರಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ ಸಮಾಜ ಹಾಗೂ ಕುಟುಂಬ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಇದನ್ನು ತಡೆಯಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಲಾಯಿತು.
ಮಾದಕ ವಸ್ತುಗಳ ಅಕ್ರಮ ಸಾಗಾಣಿಕೆ, ಮಾರಾಟ ಹಾಗೂ ಬಳಕೆಯ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಯಿತು. ವಿದ್ಯಾರ್ಥಿಗಳು ಮತ್ತು ಯುವಕರು ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು ಎಂಬ ಸಂದೇಶವನ್ನೂ ಅಭಿಯಾನದಲ್ಲಿ ಸಾರಲಾಯಿತು.
ಜಾಗೃತಿ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.