
ಬೆಂಗಳೂರು, 20 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾದ ೬ ಕೋಟಿ ರೂ.ಗಳ ಚೆಕ್ಕನ್ನು ಮಂಡಳಿಯ ಅಧ್ಯಕ್ಷರಾದ ಶಾಸಕ ನರೇಂದ್ರ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಕಾವೇರಿ ನಿವಾಸದಲ್ಲಿ ಹಸ್ತಾಂತರಿಸಿದರು.
ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ, ಸದಸ್ಯ ಕಾರ್ಯದರ್ಶಿ ಆರ್.ಗೋಕುಲ, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.