ಕೃಷಿ ಭಾಗ್ಯ’ ಯೋಜನೆಯಲ್ಲಿ ದಾವಣಗೆರೆ ಜಿಲ್ಲೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನ
ದಾವಣಗೆರೆ, 20 ಮೇ (ಹಿ.ಸ.) : ಆ್ಯಂಕರ್ : ಕೃಷಿ ಇಲಾಖೆಯ ‘ಕೃಷಿ ಭಾಗ್ಯ’ ಯೋಜನೆಯಡಿ ಅತ್ಯುತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪುರಸ್ಕಾರ ಲಭಿಸಿದೆ. ಬೆಂಗಳೂರುದಲ್ಲಿರುವ ಕೃಷಿ ಇಲಾಖೆಯ ಕೇಂದ್ರ ಕಚೇರಿಯ ಸಂಗಮ ಸಭಾಂಗಣದಲ್ಲಿ ಮೇ 18 ಮತ್ತು 19ರಂ
Prize


ದಾವಣಗೆರೆ, 20 ಮೇ (ಹಿ.ಸ.) :

ಆ್ಯಂಕರ್ : ಕೃಷಿ ಇಲಾಖೆಯ ‘ಕೃಷಿ ಭಾಗ್ಯ’ ಯೋಜನೆಯಡಿ ಅತ್ಯುತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪುರಸ್ಕಾರ ಲಭಿಸಿದೆ.

ಬೆಂಗಳೂರುದಲ್ಲಿರುವ ಕೃಷಿ ಇಲಾಖೆಯ ಕೇಂದ್ರ ಕಚೇರಿಯ ಸಂಗಮ ಸಭಾಂಗಣದಲ್ಲಿ ಮೇ 18 ಮತ್ತು 19ರಂದು ನಡೆದ 2026-27ನೇ ಸಾಲಿನ ರಾಜ್ಯ ಮಟ್ಟದ ಮುಂಗಾರು ಹಂಗಾಮು ಕಾರ್ಯಾಗಾರದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

2025-26ನೇ ಸಾಲಿನ ಕೃಷಿ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸುವ ಉದ್ದೇಶದಿಂದ ಎರಡು ದಿನಗಳ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಾಗಾರವನ್ನು ರಾಜ್ಯ ಕೃಷಿ ಸಚಿವ ಚೆಲುವರಾಯಸ್ವಾಮಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೃಷಿ ಆಯುಕ್ತ ವೈ.ಎಸ್. ಪಾಟೀಲ್ ಹಾಗೂ ಕೃಷಿ ನಿರ್ದೇಶಕ ಡಾ. ಜಿ.ಟಿ. ಪುತ್ರ ಅವರು ಇಲಾಖೆಯ ಭೌತಿಕ ಮತ್ತು ಆರ್ಥಿಕ ಪ್ರಗತಿ, ಮುಂಗಾರು ಹಂಗಾಮಿನ ಸಿದ್ಧತೆ ಹಾಗೂ ರೈತಪರ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಕೃಷಿ ಭಾಗ್ಯ’ ಯೋಜನೆಯಡಿ ಕೃಷಿ ಹೊಂಡಗಳ ಅನುಷ್ಠಾನ ಮತ್ತು ಪರಿಣಾಮಕಾರಿ ಕಾರ್ಯನಿರ್ವಹಣೆಯಲ್ಲಿ ದಾವಣಗೆರೆ ಜಿಲ್ಲೆ ಅತ್ಯುತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಈ ಗೌರವ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಾವಣಗೆರೆ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ ಕೆ., ಉಪ ಕೃಷಿ ನಿರ್ದೇಶಕರಾದ ಭಾರತಮ್ಮ, ರೇವಣಸಿದ್ದನಗೌಡ ಹೆಚ್.ಕೆ., ತಿಪ್ಪೇಸ್ವಾಮಿ ಆರ್. ಹಾಗೂ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಧರಮೂರ್ತಿ ಡಿ.ಎಂ., ನಟರಾಜ್, ವಿಶ್ವನಾಥ್, ಅರುಣ್ ಕುಮಾರ್ ಮತ್ತು ಶ್ವೇತಾ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು ಎಂದು ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande