ಜಿಬಿಎ ಚುನಾವಣೆ ; ಎರಡು ತಿಂಗಳ ಹೆಚ್ಚುವರಿ ಕಾಲಾವಕಾಶ
ನವದೆಹಲಿ, 20 ಮೇ (ಹಿ.ಸ.) : ಆ್ಯಂಕರ್ : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ನಿಂದ ಭಾಗಶಃ ನಿರಾಳತೆ ದೊರೆತಿದೆ. ಜಿಬಿಎ ಚುನಾವಣೆ ನಡೆಸಲು ಹೆಚ್ಚುವರಿ ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ
GBA office


ನವದೆಹಲಿ, 20 ಮೇ (ಹಿ.ಸ.) :

ಆ್ಯಂಕರ್ : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ನಿಂದ ಭಾಗಶಃ ನಿರಾಳತೆ ದೊರೆತಿದೆ. ಜಿಬಿಎ ಚುನಾವಣೆ ನಡೆಸಲು ಹೆಚ್ಚುವರಿ ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಆಗಸ್ಟ್ 31ರವರೆಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶ ನೀಡಿದೆ.

ಈ ಮೊದಲು ಜೂನ್ ಅಂತ್ಯದೊಳಗೆ ಜಿಬಿಎ ಚುನಾವಣೆಯನ್ನು ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ, ಕ್ಷೇತ್ರ ಮರುರಚನೆ, ಆಡಳಿತಾತ್ಮಕ ಸಿದ್ಧತೆ ಹಾಗೂ ಮತದಾರರ ಪಟ್ಟಿಗಳ ಪರಿಷ್ಕರಣೆ ಸೇರಿದಂತೆ ವಿವಿಧ ಕಾರಣಗಳನ್ನು ಉಲ್ಲೇಖಿಸಿ ಕರ್ನಾಟಕ ಸರ್ಕಾರ ಹೆಚ್ಚುವರಿ ಮೂರು ತಿಂಗಳ ಕಾಲಾವಕಾಶಕ್ಕಾಗಿ ಅರ್ಜಿ ಸಲ್ಲಿಸಿತ್ತು.

ಸರ್ಕಾರದ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್, ಮೂರು ತಿಂಗಳ ಅವಧಿಯನ್ನು ಒಪ್ಪದೇ, ಎರಡು ತಿಂಗಳ ಹೆಚ್ಚುವರಿ ಸಮಯ ಮಾತ್ರ ನೀಡಿದೆ. ಅದರಂತೆ ಆಗಸ್ಟ್ 31ರೊಳಗೆ ಚುನಾವಣೆ ನಡೆಸುವಂತೆ ನ್ಯಾಯಾಲಯ ಸ್ಪಷ್ಟ ಸೂಚನೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande