ಬಿಜೆಪಿ ಸಂವಿಧಾನವನ್ನು ದುರ್ಬಲಗೊಳಿಸಿದೆ : ರಾಹುಲ್ ಗಾಂಧಿ
ರಾಯಬರೇಲಿ, 20 ಮೇ (ಹಿ.ಸ.) : ಆ್ಯಂಕರ್ : ಲೋಕ ಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಭಾರತೀಯ ಜನತಾ ಪಕ್ಷ ಹಾಗೂ ಅದರ ವೈಚಾರಿಕ ಸಂಘಟನೆಗಳು ಸೇರಿ ಸಂವಿಧಾನವನ್ನು ದುರ್ಬಲಗೊಳಿಸಿವೆ ಎಂದು ಆರೋಪಿಸಿದರು. ಈಗ ಸಂವಿಧಾನವನ್ನು ಉಳಿಸುವ ಜವಾಬ್ದಾರಿ ಜನರ ಮೇಲಿದೆ ಎಂದು ಅವರು ಕರೆ ನೀಡಿದರು. ಉತ್ತರ ಪ್
ರಾಹುಲ್ ಗಾಂಧಿ


ರಾಯಬರೇಲಿ, 20 ಮೇ (ಹಿ.ಸ.) :

ಆ್ಯಂಕರ್ : ಲೋಕ ಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಭಾರತೀಯ ಜನತಾ ಪಕ್ಷ ಹಾಗೂ ಅದರ ವೈಚಾರಿಕ ಸಂಘಟನೆಗಳು ಸೇರಿ ಸಂವಿಧಾನವನ್ನು ದುರ್ಬಲಗೊಳಿಸಿವೆ ಎಂದು ಆರೋಪಿಸಿದರು. ಈಗ ಸಂವಿಧಾನವನ್ನು ಉಳಿಸುವ ಜವಾಬ್ದಾರಿ ಜನರ ಮೇಲಿದೆ ಎಂದು ಅವರು ಕರೆ ನೀಡಿದರು.

ಉತ್ತರ ಪ್ರದೇಶ ಪ್ರವಾಸದ ಎರಡನೇ ದಿನ ಬುಧವಾರ ರಾಯಬರೇಲಿಯ ಲೋಧ್ವಾರಿ ಪ್ರದೇಶದಲ್ಲಿ ನಡೆದ “ಬಹುಜನ ಸ್ವಾಭಿಮಾನ ಸಭೆ”ಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಶಹೀದ್ ವೀರಾ ಪಾಸಿ ಪ್ರತಿಮೆಯ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭೆಯಲ್ಲಿ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ದೇಶಕ್ಕೆ ಮಹಾತ್ಮ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳ ಅಗತ್ಯವಿದೆ ಎಂದು ಹೇಳಿದ ರಾಹುಲ್ ಗಾಂಧಿ, “ಸಂವಿಧಾನದ ಮೌಲ್ಯಗಳನ್ನು ಹಾಳು ಮಾಡಲಾಗಿದೆ. ವಿಶ್ವವಿದ್ಯಾಲಯಗಳಲ್ಲಿ ತಮಗೆ ಇಷ್ಟವಾದವರನ್ನು ನೇಮಿಸಲಾಗಿದೆ. ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನದ ಆತ್ಮವನ್ನು ಕಡೆಗಣಿಸಲಾಗುತ್ತಿದೆ” ಎಂದು ಆರೋಪಿಸಿದರು.

ಬೆಲೆ ಏರಿಕೆ ಹೆಚ್ಚುತ್ತಿದೆ, ಆರ್ಥಿಕ ವ್ಯವಸ್ಥೆ ಸಂಕಷ್ಟದಲ್ಲಿದೆ ಎಂದು ಹೇಳಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧವೂ ಟೀಕಾ ಪ್ರಹಾರ ನಡೆಸಿದರು. “ದೇಶ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿರುವಾಗ ಪ್ರಧಾನಮಂತ್ರಿ ವಿದೇಶ ಪ್ರವಾಸಗಳಲ್ಲಿ ತೊಡಗಿದ್ದಾರೆ. ನಿರ್ಣಾಯಕ ಸಮಯದಲ್ಲಿ ಜನರ ಜೊತೆಗೆ ನಿಲ್ಲಬೇಕಾದ ಸರ್ಕಾರ ವಿಫಲವಾಗಿದೆ” ಎಂದು ಅವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande