ರಾಜ್ಯಾದ್ಯಂತ ಬಿಸಿಲು, ಕೆಲವೆಡೆ ಗುಡುಗು-ಸಿಡಿಲಿನೊಂದಿಗೆ ಮಳೆ ಸಾಧ್ಯತೆ
ಬೆಂಗಳೂರು, 20 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಾದ್ಯಂತ ಬುಧವಾರವೂ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಧ್ಯಾಹ್ನದ ಬಳಿಕ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ನಿರೀಕ್ಷೆಯಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿ
ರಾಜ್ಯಾದ್ಯಂತ ಬಿಸಿಲು, ಕೆಲವೆಡೆ ಗುಡುಗು-ಸಿಡಿಲಿನೊಂದಿಗೆ ಮಳೆ ಸಾಧ್ಯತೆ


ಬೆಂಗಳೂರು, 20 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಬುಧವಾರವೂ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಧ್ಯಾಹ್ನದ ಬಳಿಕ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ನಿರೀಕ್ಷೆಯಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಒಳನಾಡು ಪ್ರದೇಶಗಳು ಹಾಗೂ ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ವ್ಯಕ್ತವಾಗಿದೆ.

ಕರಾವಳಿ ಭಾಗಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ನಿರೀಕ್ಷೆಯಿದ್ದು, ತೇವಾಂಶದ ಪ್ರಮಾಣವೂ ಅಧಿಕವಾಗಿರಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಗುಡುಗು-ಸಿಡಿಲಿನ ಸಂದರ್ಭದಲ್ಲಿ ಮರಗಳ ಕೆಳಗೆ ನಿಲ್ಲುವುದು ಹಾಗೂ ತೆರವಾದ ಪ್ರದೇಶಗಳಲ್ಲಿ ಸಂಚರಿಸುವುದನ್ನು ತಪ್ಪಿಸಲು ಹವಾಮಾನ ಇಲಾಖೆ ಸಲಹೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande