ಎಸ್ಐಆರ್ ಕುರಿತು ತರಬೇತಿ ಕಾರ್ಯಾಗಾರ
ಬೆಂಗಳೂರು, 20 ಮೇ (ಹಿ.ಸ.) : ಆ್ಯಂಕರ್ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಕಲಬುರಗಿ ವಿಭಾಗದ ವಿವಿಧ ಜಿಲ್ಲೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರವನ್ನು ಬುಧವಾರ ಆಯೋಜಿಸಲಾಯಿತು. ಚುನಾವಣ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಈ ಕಾರ್ಯಾಗಾರದಲ್ಲಿ ಕಲ
Training


ಬೆಂಗಳೂರು, 20 ಮೇ (ಹಿ.ಸ.) :

ಆ್ಯಂಕರ್ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಕಲಬುರಗಿ ವಿಭಾಗದ ವಿವಿಧ ಜಿಲ್ಲೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರವನ್ನು ಬುಧವಾರ ಆಯೋಜಿಸಲಾಯಿತು.

ಚುನಾವಣ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಈ ಕಾರ್ಯಾಗಾರದಲ್ಲಿ ಕಲಬುರಗಿ ವಿಭಾಗಕ್ಕೆ ಸೇರಿದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು, ಮತದಾರರ ಮಾಹಿತಿ ನವೀಕರಣ, ಹೊಸ ಮತದಾರರ ನೋಂದಣಿ, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳ ತಿದ್ದುಪಡಿ ಮತ್ತು ಅಳಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ವಿವರವಾದ ತರಬೇತಿ ನೀಡಲಾಯಿತು.

ಮತದಾರರ ಪಟ್ಟಿಯ ಶುದ್ಧತೆ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕಾರ್ಯಾಗಾರದಲ್ಲಿ ಸೂಚಿಸಲಾಯಿತು. ಚುನಾವಣಾ ಪ್ರಕ್ರಿಯೆಯನ್ನು ಸುಗಮ ಹಾಗೂ ನಿಖರವಾಗಿ ನಡೆಸಲು ಅಗತ್ಯವಾದ ತಾಂತ್ರಿಕ ಮತ್ತು ಆಡಳಿತಾತ್ಮಕ ಅಂಶಗಳ ಕುರಿತೂ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ಕಾರ್ಯಾಗಾರದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳು, ಕ್ಷೇತ್ರಮಟ್ಟದ ಕಾರ್ಯಪದ್ಧತಿ ಹಾಗೂ ಸಾರ್ವಜನಿಕರಿಂದ ಅರ್ಜಿಗಳ ಸ್ವೀಕಾರ ಮತ್ತು ಪರಿಶೀಲನೆ ಕುರಿತಂತೆ ಪ್ರಾಯೋಗಿಕ ತರಬೇತಿಯನ್ನೂ ನೀಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande