ಧಾರವಾಡ ಪ್ರತ್ಯೇಕ ಪಾಲಿಕೆ ; ಪ್ರಲ್ಹಾದ ಜೋಶಿ ನೇತೃತ್ವದ ನಿಯೋಗದಿಂದ ರಾಜ್ಯಪಾಲರಿಗೆ ಮನವಿ
ಬೆಂಗಳೂರು, 20 ಮೇ (ಹಿ.ಸ.) : ಆ್ಯಂಕರ್ : ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಸಂಬಂಧಿಸಿದ ಬೇಡಿಕೆ ಮತ್ತೆ ವೇಗ ಪಡೆದುಕೊಂಡಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನೇತೃತ್ವದ ನಿಯೋಗವು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಪ್ರತ್ಯೇಕ ಪಾಲಿಕೆ ರಚನೆಗೆ ಮನವಿ ಸ
Meet


ಬೆಂಗಳೂರು, 20 ಮೇ (ಹಿ.ಸ.) :

ಆ್ಯಂಕರ್ : ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಸಂಬಂಧಿಸಿದ ಬೇಡಿಕೆ ಮತ್ತೆ ವೇಗ ಪಡೆದುಕೊಂಡಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನೇತೃತ್ವದ ನಿಯೋಗವು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಪ್ರತ್ಯೇಕ ಪಾಲಿಕೆ ರಚನೆಗೆ ಮನವಿ ಸಲ್ಲಿಸಿದೆ.

ಧಾರವಾಡ ಪ್ರತ್ಯೇಕ ಪಾಲಿಕೆ ಬೇಡಿಕೆ ಹಲವು ವರ್ಷಗಳಿಂದ ಸಾರ್ವಜನಿಕರ ಪ್ರಮುಖ ಆಗ್ರಹವಾಗಿದ್ದು, ಆರಂಭದಲ್ಲೇ ಬಿಜೆಪಿ ಈ ವಿಚಾರಕ್ಕೆ ಬೆಂಬಲ ವ್ಯಕ್ತಪಡಿಸಿತ್ತು. ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಂದಾಗಿಯೇ ಮುಂದುವರಿದರೆ 16ನೇ ಹಣಕಾಸು ಆಯೋಗದ ಅಡಿಯಲ್ಲಿ ಹೆಚ್ಚಿನ ಅನುದಾನ ದೊರೆಯುವ ಸಾಧ್ಯತೆ ಇರುವುದರಿಂದ ವಿಭಜನೆ ಬೇಡ ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ಆದರೆ ಧಾರವಾಡ ಭಾಗದ ಜನರ ನಿರಂತರ ಒತ್ತಾಯ, ಸ್ಥಳೀಯರ ಭಾವನೆ ಹಾಗೂ ಪ್ರಾದೇಶಿಕ ಆಶಯಗಳಿಗೆ ಗೌರವ ನೀಡುವ ನಿಟ್ಟಿನಲ್ಲಿ ಇದೀಗ ಪ್ರತ್ಯೇಕ ಪಾಲಿಕೆಯ ಪರ ನಿಲ್ಲಲು ತೀರ್ಮಾನಿಸಲಾಗಿದೆ ಎಂದು ನಿಯೋಗ ತಿಳಿಸಿದೆ.

ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯಲ್ಲಿ ಧಾರವಾಡ ನಗರದ ಐತಿಹಾಸಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಉಲ್ಲೇಖಿಸಲಾಗಿದೆ. ರಸ್ತೆ, ಕುಡಿಯುವ ನೀರು, ಒಳಚರಂಡಿ, ಸ್ವಚ್ಛತೆ ಸೇರಿದಂತೆ ಹಲವು ಮೂಲಸೌಕರ್ಯ ಸಮಸ್ಯೆಗಳು ನಗರವನ್ನು ಕಾಡುತ್ತಿವೆ ಎಂದು ನಿಯೋಗ ವಿವರಿಸಿದೆ. ಜೋಡಿ ನಗರಗಳ ಸಮಗ್ರ ಆಡಳಿತ ವ್ಯವಸ್ಥೆಯಲ್ಲಿ ಧಾರವಾಡ ಭಾಗಕ್ಕೆ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ಆದ್ಯತೆ ಸಿಗುತ್ತಿಲ್ಲ ಎಂಬ ಸಾರ್ವಜನಿಕ ಅಸಮಾಧಾನವನ್ನೂ ರಾಜ್ಯಪಾಲರ ಗಮನಕ್ಕೆ ತರಲಾಗಿದೆ.

ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಯಾದರೆ ಧಾರವಾಡದ ಅಗತ್ಯಗಳಿಗೆ ತಕ್ಕಂತೆ ಅಭಿವೃದ್ಧಿ ಯೋಜನೆ ರೂಪಿಸಲು, ಸ್ಥಳೀಯ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಲು ಹಾಗೂ ನಾಗರಿಕ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸಲು ಸಾಧ್ಯವಾಗಲಿದೆ ಎಂದು ನಿಯೋಗ ಅಭಿಪ್ರಾಯಪಟ್ಟಿದೆ.

ಮನವಿಯನ್ನು ಆಲಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ವಿಷಯವನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು ಕಾನೂನುಬದ್ಧ ಹಾಗೂ ಆಡಳಿತಾತ್ಮಕ ಅಂಶಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande