
ಶಿವಮೊಗ್ಗ, 21 ಮೇ (ಹಿ.ಸ.) :
ಆ್ಯಂಕರ್ : ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ಆಡಳಿತ ಭವನದಲ್ಲಿ ಗುರುವಾರ “ಭಯೋತ್ಪಾದನಾ ವಿರೋಧಿ ದಿನ”ವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ. ತಿಮ್ಮರಾಯಪ್ಪ, ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಜಗನ್ನಾಥ ಡಾಂಗೆ, ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರೊ. ಎಂ.ಆರ್. ಸತ್ಯಪ್ರಕಾಶ್, ವಾಣಿಜ್ಯ ನಿಕಾಯದ ಡೀನ್ ಪ್ರೊ. ಹೆಚ್.ಎನ್. ರಮೇಶ್, ಉಪಕುಲಸಚಿವರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪ್ರೊ. ಕೆ.ಆರ್. ಮಂಜುನಾಥ್ ಅವರು ಭಯೋತ್ಪಾದನೆ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಎಲ್ಲರಿಗೂ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಭಯೋತ್ಪಾದನೆ ಸಮಾಜದ ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕತೆಗೆ ಧಕ್ಕೆ ತರುವ ದುಷ್ಪ್ರವೃತ್ತಿಯಾಗಿದ್ದು, ಅದನ್ನು ತೊಡೆದುಹಾಕಲು ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ನೀಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.