


ಕುಡತಿನಿ, 21 ಮೇ (ಹಿ.ಸ.) :
ಆ್ಯಂಕರ್ : ಸಂಡೂರು ತಾಲ್ಲೂಕಿನ ಸುಲ್ತಾನಪುರ ಗ್ರಾಮದ ನಿವಾಸಿ ಉಮಾದೇವಿ (34) ಅವರು ಮಕ್ಕಳಾದ ಜಯಶ್ರೀ (14) ಮತ್ತು ನಾಗರತ್ನ (10) ಅವರನ್ನು ಕರೆದುಕೊಂಡು ಮೇ 15 ರಿಂದ ಕಾಣೆಯಾಗಿದ್ದಾರೆ.
ಈ ಕುರಿತು ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ಉಪ-ನಿರೀಕ್ಷಕರು ಮನವಿ ಮಾಡಿದ್ದಾರೆ.
ಉಮಾದೇವಿ: ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಮನೆಯಿಂದ ಹೊರಡುವಾಗ ಕಡು ನೀಲಿ ಬಣ್ಣದ ಸೀರೆ ಹಾಗೂ ಕುಪ್ಪಸ ಧರಿಸಿದ್ದರು. ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.
ಎಸ್. ಜಯಶ್ರೀ : ದುಂಡು ಮುಖ, ಗೋಧಿ ಮೈಬಣ್ಣ, ಸದೃಢ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂರ್ಭದಲ್ಲಿ ಗುಲಾಬಿ ಬಣ್ಣದ ಪ್ರಾಕ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾಳೆ.
ಎಸ್. ನಾಗರತ್ನ : ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಟಿ-ರ್ಟ್, ಕಂದು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾಳೆ.
ಈ ಮಹಿಳೆ ಮತ್ತು ಮಕ್ಕಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಬಳ್ಳಾರಿ ಎಸ್.ಪಿ ಕಚೇರಿ ದೂ.08392-258100, ತೋರಣಗಲ್ಲು ಡಿ.ಎಸ್.ಪಿ ಮೊ.9480803010, ಕುರುಗೋಡು ವೃತ್ತ ಸಿಪಿಐ ಮೊ.9480803039, ಕುಡುತಿನಿ ಪೊಲೀಸ್ ಠಾಣೆಯ ಪಿಎಸ್ಐ ಮೊ.9480803078 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್