ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿ ಶಾಲೆ ಅತಿಥಿ ಶಿಕ್ಷಕರ ನೇಮಕಾತಿ
ಕೊಪ್ಪಳ, 21 ಮೇ (ಹಿ.ಸ.) : ಆ್ಯಂಕರ್ : ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಯಡ್ಡೋಣಿ ಗ್ರಾಮದ
ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿ ಶಾಲೆ ಅತಿಥಿ ಶಿಕ್ಷಕರ ನೇಮಕಾತಿ


ಕೊಪ್ಪಳ, 21 ಮೇ (ಹಿ.ಸ.) :

ಆ್ಯಂಕರ್ : ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಯಲಬುರ್ಗಾ ತಾಲೂಕಿನ ಯಡ್ಡೋಣಿ ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಮತ್ತು ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಈ ಎರಡು ಶಾಲೆಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಲ್ಲಿ ವಿವಿಧ ವಿಷಯಗಳ ಅತಿಥಿ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಕನ್ನಡ, ಇಂಗ್ಲಿಷ್, ಗಣಿತ, ವಿಜ್ಞಾನ, ಹಿಂದಿ, ಸಮಾಜ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ವಿಷಯಗಳಿಗೆ ಒಟ್ಟು 10 ಅತಿಥಿ ಶಿಕ್ಷಕರ ಹುದ್ದೆಗಳು ಲಭ್ಯವಿವೆ.

ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದು. ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಪಿಯುಸಿ, ಡಿ.ಎಡ್ ಹಾಗೂ ಟಿಇಟಿ ವಿದ್ಯಾರ್ಹತೆ ಕಡ್ಡಾಯವಾಗಿದ್ದು, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಬಿಎ/ ಬಿಎಸ್ಸಿ, ಬಿ.ಎಡ್ ಹಾಗೂ ಟಿಇಟಿ ವಿದ್ಯಾರ್ಹತೆ ಹೊಂದಿರಬೇಕು. ದೈಹಿಕ ಶಿಕ್ಷಣ ಶಿಕ್ಷಕರಿಗೆ ಬಿಪಿ.ಎಡ್ ಅರ್ಹತೆ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಅನುಭವ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಮೇ 27 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಷರತ್ತುಗಳು : ಅತಿಥಿ ಶಿಕ್ಷಕರ ಆಯ್ಕೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಯ ಮೂಲಕವೇ ಮಾಡಲಾಗುವುದು. ಮಂಜೂರಾದ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ತಾತ್ಕಾಲಿಕ ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ನಿಯಮಾನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 1 ರಿಂದ 7ನೇ ತರಗತಿಯವರೆಗೆ (ಪ್ರಾಥಮಿಕ ಶಾಲಾ ಶಿಕ್ಷಕರು) ಪಿಯುಸಿ, ಡಿ.ಎಡ್ ಹಾಗೂ 8 ರಿಂದ 10ನೇ ತರಗತಿಯವರೆಗೆ (ಪ್ರೌಢಶಾಲಾ ಶಿಕ್ಷಕರು) ಬಿಎ ಬಿ.ಎಡ್ ಅಥವಾ ಬಿಎಸ್ಸಿ ಬಿ.ಎಡ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಅತಿಥಿ ಶಿಕ್ಷಕರನ್ನು ವಿದ್ಯಾರ್ಥಿಗಳ ಸಂಖ್ಯಾಬಲಕ್ಕೆ ಅನುಗುಣವಾಗಿ ಅತಿಥಿ ಶಿಕ್ಷಕರನ್ನಾಗಿ ಆಯಾ ಶೈಕ್ಷಣಿಕ ವರ್ಷಕ್ಕೆ ತಾತ್ಕಲಿಕವಾಗಿ ನೇಮಕ ಮಾಡಿಕೊಳ್ಳಲಾಗುವುದು. ಅತಿಥಿ ಶಿಕ್ಷಕರ ನೇಮಕ ಮಾಡಿಕೊಂಡ ಹುದ್ದೆಗಳಿಗೆ ವರ್ಗಾವಣೆ, ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು ಸ್ಥಳ ನಿಯುಕ್ತಿಗೊಂಡಲ್ಲಿ ಆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರನ್ನು ಕರ್ತವ್ಯ ದಿಂದ ಬಿಡುಗಡೆಗೊಳಿಸಲಾಗುವುದು.

ಷರತ್ತುಗಳಂತೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಯಡ್ಡೋಣಿ ಮತ್ತು ಚಿಕ್ಕಬೆಣಕಲ್ ಶಾಲೆಗಳಲ್ಲಿ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಅತಿಥಿ ಶಿಕ್ಷಕರಿಗಾಗಿ ಸೇವೆ ಸಲ್ಲಿಸಲಿಚ್ಛೀಸುವ ಆಸಕ್ತ ಅಭ್ಯರ್ಥಿಗಳು ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಅಥವಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳಲ್ಲಿ ಅರ್ಜಿ ನಮೂನೆಗಳನ್ನು ಪಡೆಯಬಹುದಾಗಿದೆ. ಅರ್ಜಿ ನಮೂನೆಯೊಂದಿಗೆ ಅಗತ್ಯ ದೃಢೀಕೃತ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ತಾಲೂಕಾ ಕಛೇರಿಗಳಲ್ಲಿ ಮೇ 27ರ ಮಧ್ಯಾಹ್ನ 1.30 ಗಂಟೆ ಒಳಗಡೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande