ನಾಳೆ ಬೆಂಗಳೂರು ಉತ್ತರ ನಗರ ಪಾಲಿಕೆಯಲ್ಲಿ ‘ಫೋನ್-ಇನ್’ ಕಾರ್ಯಕ್ರಮ
ಬೆಂಗಳೂರು, 21 ಮೇ (ಹಿ.ಸ.) : ಆ್ಯಂಕರ್ : ಬೆಂಗಳೂರು ಉತ್ತರ ನಗರ ಪಾಲಿಕೆ ವತಿಯಿಂದ ನಾಗರಿಕರೊಂದಿಗೆ ನೇರ ಸಂಪರ್ಕ ಸಾಧಿಸಿ, ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ಪ್ರತಿ ಶುಕ್ರವಾರ ‘ಫೋನ್-ಇನ್’ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಈ ವಾರದ ಕಾರ್ಯಕ್ರಮವು ಶುಕ್ರವಾರ, ಮೇ 22
Phone in


ಬೆಂಗಳೂರು, 21 ಮೇ (ಹಿ.ಸ.) :

ಆ್ಯಂಕರ್ : ಬೆಂಗಳೂರು ಉತ್ತರ ನಗರ ಪಾಲಿಕೆ ವತಿಯಿಂದ ನಾಗರಿಕರೊಂದಿಗೆ ನೇರ ಸಂಪರ್ಕ ಸಾಧಿಸಿ, ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ಪ್ರತಿ ಶುಕ್ರವಾರ ‘ಫೋನ್-ಇನ್’ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಈ ವಾರದ ಕಾರ್ಯಕ್ರಮವು ಶುಕ್ರವಾರ, ಮೇ 22, 2026 ರಂದು ಬೆಳಗ್ಗೆ 7:00 ರಿಂದ 9:00 ಗಂಟೆಯವರೆಗೆ ನಡೆಯಲಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳು, ಅಹವಾಲುಗಳು ಹಾಗೂ ಸಲಹೆಗಳನ್ನು ನೇರವಾಗಿ ಆಯುಕ್ತರ ಗಮನಕ್ಕೆ ತರಬಹುದಾಗಿದೆ.

ನಗರದ ರಸ್ತೆ, ಸ್ವಚ್ಛತೆ, ಕುಡಿಯುವ ನೀರು, ಬೀದಿ ದೀಪ, ತೆರಿಗೆ ಸೇರಿದಂತೆ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಸಾರ್ವಜನಿಕರು ಈ ಕಾರ್ಯಕ್ರಮದ ಮೂಲಕ ಅಧಿಕಾರಿಗಳೊಂದಿಗೆ ನೇರವಾಗಿ ಮಾತನಾಡಿ ಪರಿಹಾರಕ್ಕಾಗಿ ಮನವಿ ಸಲ್ಲಿಸಬಹುದು.

ಉತ್ತರ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪಾಲಿಕೆ ಪ್ರಕಟಣೆ ಮೂಲಕ ಮನವಿ ಮಾಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande