
ಹಾಸನ, 21 ಮೇ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ವತಿಯಿಂದ ನಗರದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಪ್ಲಾಂಟರ್ಸ್ ಸಂಘದ ವಾರ್ಷಿಕ ಸಮ್ಮೇಳನ, ಕೃಷಿ ಮೇಳ ಹಾಗೂ 30ನೇ ವಾರ್ಷಿಕ ಮಹಾಸಭೆಯಲ್ಲಿ ಸಂಸದ ಶ್ರೇಯಸ್ ಪಟೇಲ್ ಭಾಗವಹಿಸಿದರು.
ಸಮ್ಮೇಳನದಲ್ಲಿ ಕಾಫಿ ಕ್ಷೇತ್ರದ ಅಭಿವೃದ್ಧಿ, ತೋಟಗಾರಿಕಾ ಬೆಳೆಗಳು ಎದುರಿಸುತ್ತಿರುವ ಸವಾಲುಗಳು, ಮಾರುಕಟ್ಟೆ ವ್ಯವಸ್ಥೆಯ ಸುಧಾರಣೆ, ಹೊಸ ತಂತ್ರಜ್ಞಾನಗಳ ಅಳವಡಿಕೆ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳ ಕುರಿತು ವ್ಯಾಪಕ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಶ್ರೇಯಸ್ ಪಟೇಲ್ ಜಿಲ್ಲೆಯ ಆರ್ಥಿಕ ಬೆಳವಣಿಗೆಯಲ್ಲಿ ಬೆಳೆಗಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.
ರೈತರು ಮತ್ತು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ, ಸಂಘಟನೆಗಳು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.
ಕೃಷಿ ಕ್ಷೇತ್ರದ ಸದೃಢತೆ ಹಾಗೂ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಆಧುನಿಕ ತಂತ್ರಜ್ಞಾನಗಳ ಬಳಕೆ ಮತ್ತು ಮಾರುಕಟ್ಟೆ ವ್ಯವಸ್ಥೆಯ ಬಲಪಡಿಕೆ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಸಮ್ಮೇಳನದಲ್ಲಿ ಜಿಲ್ಲೆಯ ವಿವಿಧ ಭಾಗಗಳ ಬೆಳೆಗಾರರು, ಕೃಷಿ ತಜ್ಞರು, ಪ್ಲಾಂಟರ್ಸ್ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.