ಶೃಂಗೇರಿ ಮರು ಎಣಿಕೆ : ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
ನ ಡೆಯಲಿದೆ
SC


ಬೆಂಗಳೂರು, 21 ಮೇ (ಹಿ.ಸ.) :

ಆ್ಯಂಕರ್ : ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಹಾಗೂ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಬಳಿಕ ಅಂಚೆ ಮತಗಳ ಎಣಿಕೆ ಹಾಗೂ ಫಲಿತಾಂಶ ಕುರಿತು ಉಂಟಾದ ವಿವಾದ ನ್ಯಾಯಾಲಯದ ಮೆಟ್ಟಿಲೇರಿತ್ತು.

ಈ ಹಿಂದೆ ಕರ್ನಾಟಕ ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆಗೆ ಆದೇಶ ನೀಡಿತ್ತು. ಹೈಕೋರ್ಟ್ ಆದೇಶದಂತೆ ಮರು ಎಣಿಕೆ ನಡೆದ ಬಳಿಕ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಗೆಲುವು ಸಾಧಿಸಿರುವುದಾಗಿ ಘೋಷಿಸಲಾಗಿತ್ತು. ಅದರ ಬೆನ್ನಲ್ಲೇ ಅವರು ಶಾಸಕರಾಗಿ ಪ್ರಮಾಣವಚನವನ್ನೂ ಸ್ವೀಕರಿಸಿದ್ದರು.

ಆದರೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದ್ದು, ಅಂತಿಮ ತೀರ್ಪು ಬರುವವರೆಗೆ ಟಿ.ಡಿ. ರಾಜೇಗೌಡ ಅವರನ್ನೇ ಶಾಸಕರಾಗಿ ಮುಂದುವರಿಸಲು ಅವಕಾಶ ನೀಡಿತ್ತು.

ಇದರಿಂದ ಮರು ಎಣಿಕೆಯ ಆಧಾರದ ಮೇಲೆ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿಜೆಪಿ ನಾಯಕ ಜೀವರಾಜ್ ಅವರಿಗೆ ಹಿನ್ನಡೆಯಾಗಿತ್ತು.

ಇದೀಗ ಇಂದು ನಡೆಯಲಿರುವ ವಿಚಾರಣೆ ರಾಜ್ಯ ರಾಜಕೀಯದಲ್ಲಿ ಮತ್ತೆ ಕುತೂಹಲ ಮೂಡಿಸಿದ್ದು, ಸುಪ್ರೀಂಕೋರ್ಟ್ ಯಾವ ರೀತಿಯ ಮಧ್ಯಂತರ ಅಥವಾ ಅಂತಿಮ ಆದೇಶ ನೀಡಲಿದೆ ಎಂಬುದರತ್ತ ರಾಜಕೀಯ ವಲಯದ ಚಿತ್ತ ನೆಟ್ಟಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande