
ಧಾರವಾಡ, 22 ಮೇ (ಹಿ.ಸ.) :
ಆ್ಯಂಕರ್ : 2026-27ನೇ ಶೈಕ್ಷಣಿಕ ಸಾಲಿನ ಅಕ್ಷರ ದಾಸೋಹ ಹಾಗೂ ಪಿಎಂ ಪೋಷಣ್ ಶಕ್ತಿ ನಿರ್ಮಾಣ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಧಾರವಾಡ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಜಿಲ್ಲೆಯ ಬಿಸಿಯೂಟ ತಯಾರಿಕಾ ಸ್ವಯಂ ಸೇವಾ ಸಂಸ್ಥೆಗಳಾದ ಅಕ್ಷಯ ಪಾತ್ರೆ ಫೌಂಡೇಶನ್ ಹಾಗೂ ಅದಮ್ಯ ಚೇತನ ಪ್ರತಿನಿಧಿಗಳು ಭಾಗವಹಿಸಿದರು.
ಇದರೊಂದಿಗೆ ಪಿಎಂ ಪೋಷಣ್ ಶಕ್ತಿ ನಿರ್ಮಾಣ ಇಲಾಖೆಯ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ಸಹಾಯಕ ನಿರ್ದೇಶಕರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಪೂರೈಕೆಯಾಗುತ್ತಿರುವ ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ‘ಸಾಯಿ ಕ್ಯೂರ್ ರಾಗಿ ಹೆಲ್ತ್ ಮಿಕ್ಸ್ ಮಾಲ್ಟ್’ ವಿತರಣೆ ಮತ್ತು ನಿರ್ವಹಣೆಯನ್ನು ಅತ್ಯುತ್ತಮ ರೀತಿಯಲ್ಲಿ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.
ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ನಿಯಮಿತವಾಗಿ ಹಾಗೂ ಗುಣಮಟ್ಟದ ಬಿಸಿಯೂಟ ಪೂರೈಕೆ ಮಾಡಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಿತ ಅಧಿಕಾರಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳಿಗೆ ಸೂಚನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.