
ಮಂಡ್ಯ, 22 ಮೇ (ಹಿ.ಸ.) :
ಆ್ಯಂಕರ್ : ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಉಪವಿಭಾಗ ಹಾಗೂ ಕೆ.ಆರ್.ಪೇಟೆ ತಾಲೂಕಿನ ವ್ಯಾಪ್ತಿಯ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವ ಕುರಿತು ಸಮುದಾಯದ ಮುಖಂಡರೊಂದಿಗೆ ಚರ್ಚೆ ನಡೆಸಿ, ಸಾರ್ವಜನಿಕರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಹಕರಿಸಬೇಕು ಎಂದು ಪೊಲೀಸ್ ಅಧಿಕಾರಿಗಳು ಮನವಿ ಮಾಡಿದರು.
ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು. ವದಂತಿಗಳಿಗೆ ಕಿವಿಗೊಡದೆ ಪರಸ್ಪರ ಸಹಕಾರ ಹಾಗೂ ಸಾಮರಸ್ಯದಿಂದ ಹಬ್ಬ ಆಚರಿಸುವಂತೆ ತಿಳಿಸಲಾಯಿತು.
ಸಭೆಯಲ್ಲಿ ಶ್ರೀರಂಗಪಟ್ಟಣ ಹಾಗೂ ನಾಗಮಂಗಲ ಉಪವಿಭಾಗದ ಡಿವೈಎಸ್ಪಿಗಳು ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.