
ಬಳ್ಳಾರಿ, 22 ಮೇ (ಹಿ.ಸ.) :
ಆ್ಯಂಕರ್ : ನಗರದ ರೇಡಿಯೋ ಪಾರ್ಕ್ ಪ್ರದೇಶದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಂಗಳೂರಿನ ನರಸಾಪುರದ ಹೋಂಡಾ ಮೋಟಾರ್ ಸೈಕಲ್ ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಮೇ 26 ರಂದು ಬೆಳಿಗ್ಗೆ 9 ಗಂಟೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.
ಅರ್ಹತೆ :
ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ., ಎಂ.ಎಂ.ವಿ., ಡೀಸೆಲ್ ಮೆಕ್ಯಾನಿಕ್, ಎಂ.ಇ.ವಿ ವೃತ್ತಿಗಳಲ್ಲಿ ಅಂತಿಮ ವರ್ಷದ ತರಬೇತಿ ಪಡೆಯುತ್ತಿರುವವರು ಅಥವಾ ಐಟಿಐ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಅಗತ್ಯವಿರುವ ದಾಖಲೆಗಳು:
ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಇತ್ತೀಚಿನ ಭಾವಚಿತ್ರಗಳು, ಆಧಾರ್ ಕಾರ್ಡ್ ಪ್ರತಿ, ಬಯೋಡೇಟಾ, ತಮ್ಮ ಸ್ಮಾರ್ಟ್ ಫೆÇೀನ್ ಅನ್ನು ತಪ್ಪದೇ ತರಬೇಕು.
ಸೂಚನೆ: ಅಭ್ಯರ್ಥಿಗಳ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.
ಅರ್ಹ ಅಭ್ಯರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಾಚಾರ್ಯ ಕೆ.ಹೆಚ್.ಎಂ. ಪಂಡಿತಾರಾಧ್ಯ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್