ತುಷ್ಟೀಕರಣದ ಎಲ್ಲ ಮಿತಿಗಳನ್ನೂ ದಾಟಿದೆ ಕಾಂಗ್ರೆಸ್ ಸರ್ಕಾರ : ವಿಜಯೇಂದ್ರ ವಾಗ್ದಾಳಿ
ಬೆಂಗಳೂರು, 22 ಮೇ (ಹಿ.ಸ.) : ಆ್ಯಂಕರ್ : ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಲಾಡ್ಲೆ ಮಶಾಕ್ ದರ್ಗಾ ಸಂಬಂಧಿತ ಕೋಮು ಗಲಭೆ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾ
ByV


ಬೆಂಗಳೂರು, 22 ಮೇ (ಹಿ.ಸ.) :

ಆ್ಯಂಕರ್ : ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಲಾಡ್ಲೆ ಮಶಾಕ್ ದರ್ಗಾ ಸಂಬಂಧಿತ ಕೋಮು ಗಲಭೆ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಸಭ್ಯತೆಯ ಎಲ್ಲ ಮಿತಿಗಳನ್ನೂ ಮೀರಿ ನಡೆದುಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಪವಿತ್ರ ರಾಘವ ಚೈತನ್ಯ ಶಿವಲಿಂಗದ ಅವಮಾನ ಹಾಗೂ ಕಲ್ಲು ತೂರಾಟದಂತಹ ಗಂಭೀರ ಪ್ರಕರಣಗಳಿಗೆ ಸಂಬಂಧಿಸಿದ 13 ಪ್ರಕರಣಗಳನ್ನು ಸರ್ಕಾರ ವಾಪಸ್ ಪಡೆದಿರುವುದು ಖಂಡನೀಯ ಎಂದು ವಿಜಯೇಂದ್ರ ಹೇಳಿದ್ದಾರೆ.

ಇಂತಹ ಸಮಾಜ ವಿರೋಧಿ ಕೃತ್ಯಗಳಲ್ಲಿ ತೊಡಗಿದವರನ್ನು ಮುಕ್ತಗೊಳಿಸುವ ಮೂಲಕ ಸರ್ಕಾರ ಯಾವ ಸಂದೇಶ ನೀಡಲು ಹೊರಟಿದೆ ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ತರುವಂತಹ ಘಟನೆಗಳ ಬಗ್ಗೆ ಸರ್ಕಾರಕ್ಕೆ ಯಾವುದೇ ಸಂವೇದನೆ ಉಳಿದಿಲ್ಲ ಎಂದು ಆರೋಪಿಸಿದ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯನ್ನೂ ಕಾಂಗ್ರೆಸ್ ಸರ್ಕಾರ ಮರೆತಿದೆ ಎಂದು ಟೀಕಿಸಿದ್ದಾರೆ.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಪ್ರಕರಣಗಳನ್ನು ಹಿಂಪಡೆಯಲು ಶಿಫಾರಸು ಮಾಡಿರುವುದಾಗಿ ಉಲ್ಲೇಖಿಸಿದ ವಿಜಯೇಂದ್ರ, ಇದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಬ್ಯಾಂಕ್ ರಾಜಕಾರಣಕ್ಕಾಗಿ ಸಮಾಜಘಾತುಕ ಶಕ್ತಿಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ, ರಾಜ್ಯದ ಜನತೆ ಈ ಧೋರಣೆಯನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande