
ಬೆಂಗಳೂರು, 22 ಮೇ (ಹಿ.ಸ.) :
ಆ್ಯಂಕರ್ : ಬಡವರ ಮತಗಳನ್ನು ತೆಗೆಯುವ ಉದ್ದೇಶದಿಂದ ಎಸ್ಐಆರ್ ಮೂಲಕ ಸಂಚು ರೂಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕುರಿತು ಪಕ್ಷದ ಕಾರ್ಯಕರ್ತರು, ಶಾಸಕರು ಹಾಗೂ ಬಿಎಲ್ಎಗಳಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈಗಾಗಲೇ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಮತದಾರರೂ ಅರ್ಜಿ ಸಲ್ಲಿಸಬೇಕಾಗಿದೆ. ಇಲ್ಲದಿದ್ದರೆ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.
ಬೇರೆ ರಾಜ್ಯಗಳಲ್ಲಿ ಇದೇ ರೀತಿಯ ಬೆಳವಣಿಗೆಗಳು ನಡೆದಿರುವುದನ್ನು ನೋಡಿದ್ದೇವೆ. ಮತದಾನದ ಹಕ್ಕು ಕಳೆದುಕೊಂಡರೆ ಪಿಂಚಣಿ, ಗೃಹಲಕ್ಷ್ಮಿ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳಿಂದ ಜನರು ವಂಚಿತರಾಗುವ ಪರಿಸ್ಥಿತಿ ಎದುರಾಗಬಹುದು ಎಂದು ಹೇಳಿದರು.
ಮತದಾರರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಿಂದ ವ್ಯಾಪಕ ಜಾಗೃತಿ ಅಭಿಯಾನ ಕೈಗೊಳ್ಳಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.