ವೈದ್ಯಕೀಯೇತರ ವೃತ್ತಿಪರ ಕೋರ್ಸ್ ಗಳ ಕೌನ್ಸಿಲಿಂಗ್ ಆರಂಭಕ್ಕೆ ತೀರ್ಮಾನ
ನೀಟ್ ಮರುಪರೀಕ್ಷೆ ವಿಳಂಬದಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮ: ಸಚಿವ ಎಂ.ಸಿ. ಸುಧಾಕರ್
Meeting


ಬೆಂಗಳೂರು, 22 ಮೇ (ಹಿ.ಸ.) :

ಆ್ಯಂಕರ್ : ನೀಟ್ ಪ್ರವೇಶ ಪರೀಕ್ಷೆ ರದ್ದುಗೊಂಡು ಮರು ಪರೀಕ್ಷೆಯ ಫಲಿತಾಂಶ ಪ್ರಕಟಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ವೈದ್ಯಕೀಯ ಕೋರ್ಸ್ ಗಳ ಹೊರತಾಗಿ ಇತರೆ ಎಲ್ಲಾ ವೃತ್ತಿಪರ ಕೋರ್ಸ್ ಗಳ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಖಾಸಗಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಆಡಳಿತ ಮಂಡಳಿ ಸದಸ್ಯರೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಇಂಜಿನಿಯರಿಂಗ್ ಸೇರಿದಂತೆ ವೈದ್ಯಕೀಯೇತರ ವೃತ್ತಿಪರ ಕೋರ್ಸ್ಗಳಿಗೆ ಸೇರ್ಪಡೆಗೊಳ್ಳುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ನೀಟ್ ಮರುಪರೀಕ್ಷೆಯ ಫಲಿತಾಂಶ ವಿಳಂಬವಾಗುತ್ತಿರುವುದರಿಂದ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯಕೀಯ ಕೋರ್ಸ್ ಹೊರತುಪಡಿಸಿ ಉಳಿದ ವೃತ್ತಿಪರ ಕೋರ್ಸ್ ಳ ಕೌನ್ಸಿಲಿಂಗ್ ಆರಂಭಿಸಲಾಗುತ್ತಿದೆ ಎಂದು ವಿವರಿಸಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ ಸೇರಿದಂತೆ ಖಾಸಗಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande