ಹುಬ್ಬಳ್ಳಿಯಲ್ಲಿ ₹18 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಹುಬ್ಬಳ್ಳಿ, 22 ಮೇ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 52ರ ವ್ಯಾಪ್ತಿಯ ಸನ್ಮಾನ ಕಾಲೋನಿಯಲ್ಲಿ ಮಹಾನಗರ ಪಾಲಿಕೆಯ ಅನುದಾನದಡಿ ಕೈಗೆತ್ತಿಕೊಳ್ಳಲಾಗಿರುವ ಒಳಚರಂಡಿ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿತು. ಸುಮಾರು ₹18 ಲಕ್ಷ ವೆಚ್ಚದಲ್ಲಿ ಕಾಮಗಾ
ಪೂಜೆ


ಭೂಮಿ ಪೂಜೆ


ಹುಬ್ಬಳ್ಳಿ, 22 ಮೇ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 52ರ ವ್ಯಾಪ್ತಿಯ ಸನ್ಮಾನ ಕಾಲೋನಿಯಲ್ಲಿ ಮಹಾನಗರ ಪಾಲಿಕೆಯ ಅನುದಾನದಡಿ ಕೈಗೆತ್ತಿಕೊಳ್ಳಲಾಗಿರುವ ಒಳಚರಂಡಿ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿತು. ಸುಮಾರು ₹18 ಲಕ್ಷ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಕಾರ್ಯಕ್ರಮವನ್ನು ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಉದ್ಘಾಟಿಸಿದರು. ಪಾಲಿಕೆ ಸದಸ್ಯ ಚೇತನ್ ಸಹದೇವ ಹಿರೇಕೆರೂರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸನ್ಮಾನ ಕಾಲೋನಿಯ ಹಿರಿಯರು ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು. ಅಧ್ಯಕ್ಷ ಪುಂಡಲೀಕ್ ಚಿಟ್ಟಾ, ಉಪಾಧ್ಯಕ್ಷ ಗುರುನಾಥ ವೈದ್ಯ, ಪ್ರಧಾನ ಕಾರ್ಯದರ್ಶಿ ಗುರುಪಾದ್ ಬೆಟಗೇರಿ, ಸಹ ಕಾರ್ಯದರ್ಶಿ ಉಮೇಶ್ ಮಿರಜಕರ ಸೇರಿದಂತೆ ಸಿದ್ದಲಿಂಗ, ಶಿವಾನಂದ ಮುಳಗುಂದ, ಬಸವರಾಜ ಅಂಗಡಿ, ಆನಂದ ಗುಳೇದಗುಡ್ಡ, ಬದ್ದಿ, ಉಳಗಡ್ಡಿ, ಛಾಯಾ ಸೂರ್ಯವಂಷಿ, ಸುನಂದಾ ವೈದ್ಯ ಹಾಗೂ ಇತರ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕಾಲೋನಿಯ ನಿವಾಸಿಗಳು ಹಾಗೂ ಸುತ್ತಮುತ್ತಲಿನ ಬಡಾವಣೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಮಗಾರಿಗೆ ಸ್ವಾಗತ ಕೋರಿದರು. ಒಳಚರಂಡಿ ವ್ಯವಸ್ಥೆ ಸುಧಾರಣೆಯಿಂದ ಸ್ಥಳೀಯರ ಹಲವು ವರ್ಷಗಳ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ನಿವಾಸಿಗಳು ಆಶಾಭಾವನೆ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande