ಶಾಲೆಗಳಿಗೆ ಸಮವಸ್ತ್ರ ವಿತರಣೆ
ಗದಗ, 22 ಮೇ (ಹಿ.ಸ.) : ಆ್ಯಂಕರ್ : 2026-27ನೇ ಶೈಕ್ಷಣಿಕ ಸಾಲಿನ ಅಂಗವಾಗಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಪ್ರಕ್ರಿಯೆಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಗದಗ ವತಿಯಿಂದ ವಿವಿಧ ಶಾಲೆಗಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇ
ಫೋಟೋ


ಗದಗ, 22 ಮೇ (ಹಿ.ಸ.) :

ಆ್ಯಂಕರ್ : 2026-27ನೇ ಶೈಕ್ಷಣಿಕ ಸಾಲಿನ ಅಂಗವಾಗಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಪ್ರಕ್ರಿಯೆಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಗದಗ ವತಿಯಿಂದ ವಿವಿಧ ಶಾಲೆಗಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ವಿ. ಶೆಟ್ಟಪ್ಪ ಅವರು ವಿವಿಧ ಶಾಲೆಗಳ ಪ್ರತಿನಿಧಿಗಳಿಗೆ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಆರಂಭದಲ್ಲೇ ಅಗತ್ಯ ಸೌಲಭ್ಯಗಳನ್ನು ತಲುಪಿಸುವುದು ಇಲಾಖೆಯ ಆದ್ಯತೆ ಆಗಿದ್ದು, ಸಮವಸ್ತ್ರ ವಿತರಣೆಯಿಂದ ಮಕ್ಕಳಲ್ಲಿ ಶಾಲೆಯತ್ತ ಹೆಚ್ಚಿನ ಆಸಕ್ತಿ ಮತ್ತು ಆತ್ಮವಿಶ್ವಾಸ ಹೆಚ್ಚಲು ನೆರವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಯಟ್ನ ಹಿರಿಯ ಉಪನ್ಯಾಸಕರಾದ ಬಿ.ಎಫ್. ಅರವಟಗಿ, ಶಿಕ್ಷಣ ಸಂಯೋಜಕರಾದ ಮುರಳಿ ಸೋಲಾಪೂರ, ಮುಖ್ಯೋಪಾಧ್ಯಾಯರಾದ ಎಸ್.ಎಚ್. ದಂಡಗಿದಾಸರ, ಎಸ್.ಎಸ್. ಪಿಳ್ಳೆ, ಎಂ.ಎಚ್. ಇಚ್ಚಂಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಅದೇ ರೀತಿ ವಿತರಕರಾದ ಶರಣಪ್ಪ ನಡುಗೇರಿ, ವಿವಿಧ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮವಸ್ತ್ರ ವಿತರಣಾ ಕಾರ್ಯಕ್ಕೆ ಸಹಕಾರ ನೀಡಿದರು.

ವಿದ್ಯಾರ್ಥಿಗಳಿಗೆ ಸಮವಸ್ತ್ರಗಳು ಸಮಯಕ್ಕೆ ಸರಿಯಾಗಿ ತಲುಪುವ ಮೂಲಕ ಹೊಸ ಶೈಕ್ಷಣಿಕ ಸಾಲಿನ ಆರಂಭ ಸುಗಮವಾಗಲಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕೈಗೊಂಡಿರುವ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande