
ಕಲಾಮಸ್ಸೇರಿ, 22 ಮೇ (ಹಿ.ಸ.) :
ಆ್ಯಂಕರ್ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇರಳಂ ಕಲಾಮಸ್ಸೇರಿಯಲ್ಲಿರುವ ಎಚ್ಎಂಟಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಂಸ್ಥೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರು, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಾಗತಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಂದೇಶದಲ್ಲಿ, ಹಲವು ದಶಕಗಳಿಂದ ದೇಶದ ಉತ್ಪಾದನಾ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ಎಚ್ಎಂಟಿ, ಭಾರತದ ಕೈಗಾರಿಕಾ ಹಾಗೂ ಎಂಜಿನಿಯರಿಂಗ್ ಪರಂಪರೆಯ ಹೆಮ್ಮೆಯ ಸಂಕೇತವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಕೇಂದ್ರ ಸರ್ಕಾರವು ಉತ್ಪಾದನಾ ವಲಯವನ್ನು ಮತ್ತಷ್ಟು ಬಲಪಡಿಸಲು, ಕೈಗಾರಿಕಾ ಮೂಲಸೌಕರ್ಯವನ್ನು ಆಧುನೀಕರಿಸಲು ಮತ್ತು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ಸಂಸ್ಥೆಗಳನ್ನು ನಿರ್ಮಿಸಲು ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.
‘ಆತ್ಮನಿರ್ಭರ ಭಾರತ’ ಹಾಗೂ ‘ವಿಕಸಿತ ಭಾರತ್ 2047’ ಗುರಿ ಸಾಧನೆಗೆ ನಾವೀನ್ಯತೆ, ಸ್ವಾವಲಂಬನೆ, ಆಧುನಿಕ ಉತ್ಪಾದನಾ ವ್ಯವಸ್ಥೆ ಮತ್ತು ಸಬಲ ಸಾರ್ವಜನಿಕ ವಲಯದ ಉದ್ಯಮಗಳು ಪ್ರಮುಖ ಪಾತ್ರವಹಿಸಲಿವೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.