
ಬೆಂಗಳೂರು, 22 ಮೇ (ಹಿ.ಸ.) :
ಆ್ಯಂಕರ್ : ರಾಷ್ಟ್ರ ಸೇವಿಕಾ ಸಮಿತಿಯ ಹಿರಿಯ ಕಾರ್ಯಕರ್ತೆ ಮಾ॥ ಶ್ರೀಮತಿ ರುಕ್ಮಿಣಿ ಅಕ್ಕ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
ರುಕ್ಮಿಣಿ ಅಕ್ಕ ಅವರು ತಮ್ಮ ಇಡೀ ಜೀವನವನ್ನು ರಾಷ್ಟ್ರ ಸೇವೆ, ಮಹಿಳಾ ಸಂಘಟನೆ ಮತ್ತು ಸಂಸ್ಕಾರ ನಿರ್ಮಾಣ ಕಾರ್ಯಗಳಿಗೆ ಅರ್ಪಿಸಿದ್ದ ಅಪರೂಪದ ವ್ಯಕ್ತಿತ್ವವಾಗಿದ್ದರು ಎಂದು ಅವರು ತಿಳಿಸಿದ್ದಾರೆ. ಸರಳತೆ, ಶಿಸ್ತು ಹಾಗೂ ತ್ಯಾಗಮಯ ಜೀವನದ ಮೂಲಕ ಅನೇಕ ಮಹಿಳೆಯರಿಗೆ ಅವರು ಪ್ರೇರಣೆಯಾಗಿದ್ದರು ಎಂದು ಸ್ಮರಿಸಿದ್ದಾರೆ.
ಸಮಾಜದಲ್ಲಿ ರಾಷ್ಟ್ರೀಯ ಚಿಂತನೆ ಮತ್ತು ಸೇವಾಭಾವ ಬೆಳೆಸುವಲ್ಲಿ ರುಕ್ಮಿಣಿ ಅಕ್ಕ ಅವರ ಕೊಡುಗೆ ಅನನ್ಯವಾಗಿದೆ. ಅವರ ಅಗಲಿಕೆಯಿಂದ ರಾಷ್ಟ್ರ ಸೇವಿಕಾ ಸಮಿತಿಗೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಹೊಸಬಾಳೆ ಅವರು ತಮ್ಮ ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ.
ಪರಮಾತ್ಮನು ಅಗಲಿದ ಆತ್ಮಕ್ಕೆ ಸದ್ಗತಿ ನೀಡಲಿ ಹಾಗೂ ಕುಟುಂಬದ ಸದಸ್ಯರು ಮತ್ತು ಸೇವಿಕಾ ಸಮಿತಿಯ ಕಾರ್ಯಕರ್ತರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.