
ಕೋಲಾರ, ಮೇ ೨೨ (ಹಿ.ಸ) :
ಆ್ಯಂಕರ್ : ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಪ್ರತಿಯೊಬ್ಬರೂ ತಮ್ಮ ನೂರಕ್ಕೆ ನೂರರಷ್ಟು ಶ್ರಮವನ್ನು ಹಾಕಿದರೆ, ಎಲ್ಲಾ ಶಾಲೆ ಹಾಗೂ ವಸತಿ ನಿಲಯಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬಹುದು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪ್ರವೀಣ್. ಪಿ. ಬಾಗೇವಾಡಿ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ವಿದ್ಯಾರ್ಥಿನಿಲಯಗಳ ನಿರ್ವಹಣೆ, ಶೈಕ್ಷಣಿಕ ಗುಣಮಟ್ಟ ಸುಧಾರಣೆ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬAಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಿತು. ಮೂಲಸೌಕರ್ಯಗಳ ಕೊರತೆ ನಿವಾರಣೆ: ಶಾಲೆ ಅಥವಾ ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದಲ್ಲಿ, ತಕ್ಷಣವೇ ಅದಕ್ಕೆ ಸ್ಪಂದಿಸಿ ವರದಿ ನೀಡಿದರೆ, ಸಂಬ0ಧಪಟ್ಟ ಸೌಲಭ್ಯಗಳನ್ನು ಒದಗಿಸಲು ಮೇಲಾಧಿಕಾರಿಗಳು ಸಿದ್ಧರಿದ್ದಾರೆ ಎಂದು ಭರವಸೆ ನೀಡಿದರು.
ಶಾಲೆ ಅಥವಾ ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದಲ್ಲಿ, ತಕ್ಷಣವೇ ಅದಕ್ಕೆ ಸ್ಪಂದಿಸಿ ವರದಿ ನೀಡಿದರೆ, ಸಂಬAಧಪಟ್ಟ ಸೌಲಭ್ಯಗಳನ್ನು ಒದಗಿಸಲು ಮೇಲಾಧಿಕಾರಿಗಳು ಸಿದ್ಧರಿದ್ದಾರೆ. ಸಂಪೂರ್ಣ ಸ್ವಚ್ಛತೆ ಮತ್ತು ಸುರಕ್ಷತೆ: ಹಾಸ್ಟೆಲ್ಗಳಲ್ಲಿ ಬರೀ ಸ್ವಚ್ಛತೆಯಷ್ಟೇ ಅಲ್ಲದೆ, ಸುರಕ್ಷತೆಯ ದೃಷ್ಟಿಯಿಂದ ಮೊದಲಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಅದರೊಂದಿಗೆ ಗೇಟ್ಗಳು, ಬಾಗಿಲುಗಳು ಮತ್ತು ಕಿಟಕಿಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸಿ ಮೂಲಸೌಕರ್ಯಗಳನ್ನು ಸರಿಪಡಿಸಬೇಕು ಎಂದು ಎಚ್ಚರಿಸಿದರು.
ಬಾತ್ರೂಮ್ ಹಾಗೂ ಶೌಚಾಲಯಗಳನ್ನು ಸದಾ ಸ್ವಚ್ಛವಾಗಿಟ್ಟುಕೊಳ್ಳಬೇಕು. ನಾವು ನಮ್ಮ ಮನೆಯನ್ನು ಹೇಗೆ ಸ್ವಚ್ಛವಾಗಿಟ್ಟುಕೊಳ್ಳುತ್ತೇವೆಯೋ ಅದೇ ರೀತಿ ಹಾಸ್ಟೆಲ್ಗಳನ್ನೂ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು. ಮೊದಲು ಸುರಕ್ಷತೆ, ನಂತರ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು ಎಂದು ಸ್ಪಷ್ಟಿಸಿದರು.
ಹಾಸ್ಟೆಲ್ಗಳಿಗೆ ಭೇಟಿ ನೀಡಿದಾಗ ಬಿಸಿ ನೀರು ಬರುವುದಿಲ್ಲ, ಬಿಸಿ ಊಟ ಕೊಡುವುದಿಲ್ಲ ಮತ್ತು ಗುಣಮಟ್ಟದ ಆಹಾರ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಕೆಲವು ಮಕ್ಕಳಿಗೆ ಕೌನ್ಸೆಲಿಂಗ್ ಮತ್ತು ಸರಿಯಾದ ಮಾರ್ಗದರ್ಶನದ ಅವಶ್ಯಕತೆಯಿದ್ದು, ವಾರ್ಡನ್ಗಳು ಮಕ್ಕಳೊಂದಿಗೆ ಬೆರೆತು ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಮಾರ್ಗದರ್ಶಿಸಿದರು.
ಮಕ್ಕಳಲ್ಲಿರುವ ಹಾಡುಗಾರಿಕೆ, ಕ್ರೀಡೆ ಮುಂತಾದ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಯಾವುದೇ ಮಗು ಸ್ಪೋರ್ಟ್ಸ್ನಲ್ಲಿದ್ದರೆ ಅದಕ್ಕೆ ಹೆಚ್ಚಿನ ಬೆಂಬಲ ನೀಡಬೇಕು ಎಂದು ತಿಳಿಸಿದರು.
ಗಣಿತ ಅಥವಾ ಕನ್ನಡದಂತಹ ವಿಷಯಗಳಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಆಯಾ ವಿಷಯದ ತಜ್ಞರನ್ನು ಕರೆಸಿ ವಿಶೇಷ ಕಾಳಜಿ ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಕ್ರೈಸ್ ಹಾಸ್ಟೆಲ್ಗಳಲ್ಲಿ ವಾರ್ಡನ್ಗಳು ಜವಾಬ್ದಾರಿಯಿಂದ ಕೆಲಸ ಮಾಡಿ, ಮುಂದಿನ ವರ್ಷ ಯಾವುದೇ ಮಗು ಫೇಲ್ ಆಗದಂತೆ ೧೦೦% ಫಲಿತಾಂಶ ತರಲು ಪ್ರಯತ್ನಿಸಬೇಕು ಎಂದು ಪ್ರತಿಪಾದಿಸಿದರು.
ಪೋಷಕರು ತಮ್ಮ ಮಕ್ಕಳನ್ನು ವಸತಿ ನಿಲಯಗಳಿಗೆ ಕಳುಹಿಸುವಾಗ ಒಂದು ಒಳ್ಳೆಯ ನಂಬಿಕೆಯನ್ನಿಟ್ಟುಕೊAಡು ಕಳುಹಿಸಿರುತ್ತಾರೆ. ಹಾಗಾಗಿ, ವಾರ್ಡನ್ಗಳು ಕೇವಲ ಅಧಿಕಾರಿಯಾಗಿರದೆ, ಪೋಷಕರ ಸ್ಥಾನದಲ್ಲಿದ್ದು, ಮಕ್ಕಳ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ, ಕ್ರೈಸ್ ಹಾಗೂ ಬಿಸಿಎಂ ಮೂರು ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕೆಲಸ ಮಾಡಿದರೆ, ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಫಲಿತಾಂಶಗಳಲ್ಲಿ ಉತ್ತಮ ಪ್ರಗತಿ ಸಾಧಿಸಿ, ಇಡೀ ರಾಜ್ಯದಲ್ಲೇ ನಮ್ಮ ಜಿಲ್ಲೆ ಯಶಸ್ವಿಯಾಗುವಂತೆ ಮಾಡಬಹುದು ಎಂದು ನೆನಪಿಸಿದ್ದಾರೆ.
ಮಕ್ಕಳಲ್ಲಿರುವ ವಿವಿಧ ಪ್ರತಿಭೆಗಳನ್ನು (ಹಾಡುಗಾರಿಕೆ, ಕ್ರೀಡೆ, ವಾಗ್ಚಾತುರ್ಯ ಇತ್ಯಾದಿ) ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು ಎಂದು ಸಭೆಯಲ್ಲಿ ಚರ್ಚಿಸಿದರು. ಅಧಿಕಾರಿಗಳು ಮತ್ತು ವಾರ್ಡನ್ಗಳು ಮಕ್ಕಳಿಗೆ ಮಾದರಿಯಾಗಿರಬೇಕು. ಮಕ್ಕಳ ಒಟ್ಟಾರೆ ಅಭಿವೃದ್ಧಿಗೆ ಪೂರಕವಾಗಿ ಅಧಿಕಾರಿಗಳು ತಮ್ಮ ನಡವಳಿಕೆಯನ್ನು ಹೊಂದಿರಬೇಕು ಎಂದು ತಿಳಿಸಿದರು.
ದೊಡ್ಡಸಾಳ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಎರಡು ಹಾಸ್ಟೆಲ್ಗಳು ಸೇರಿದಂತೆ ಒಟ್ಟು ಮೂರ್ನಾಲ್ಕು ಹಾಸ್ಟೆಲ್ಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯಿದೆ. ಅಲ್ಲಿ ಕೊರೆಸಿರುವ ಬೋರ್ವೆಲ್ಗಳು ವಿಫಲವಾಗಿರುವುದರಿಂದ ನೀರು ಸಿಗುತ್ತಿಲ್ಲ ಎಂದು ಅಧಿಕಾರಿಗಳು ಗಮನಕ್ಕೆ ತಂದರು. ಕುಡಿಯುವ ನೀರಿನ ಸಮಸ್ಯೆ ಇರುವ ಹಾಸ್ಟೆಲ್ಗಳಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ಕನೆಕ್ಷನ್ ಕೊಡಿಸಲು ಸೂಚಿಸಿದರು. ಸರ್ಕಾರದ ನಿಯಮಾವಳಿಗಳ ಪ್ರಕಾರ ಶಾಲೆ, ಅಂಗನವಾಡಿ ಮತ್ತು ಹಾಸ್ಟೆಲ್ಗಳಿಗೆ ಶೇ. ೧೦೦ ರಷ್ಟು ನೀರಿನ ಸೌಲಭ್ಯ ಒದಗಿಸಲು ಅವಕಾಶವಿದೆ ಎಂದು ತಿಳಿಸಿದರು.
ಹಾಸ್ಟೆಲ್ಗಳಲ್ಲಿ ಯಾವುದೇ ಮೂಲಸೌಕರ್ಯ ಅಥವಾ ನೀರಿನ ಸಮಸ್ಯೆ ಇದ್ದರೆ, ಮೊದಲು ಅದನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯ ನಿರ್ವಹಣಾಧಿಕಾರಿ ಗಮನಕ್ಕೆ ತರಬೇಕು. ಅಲ್ಲಿ ಪರಿಹಾರ ಸಿಗದಿದ್ದರೆ, ತಕ್ಷಣವೇ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಲಿಖಿತವಾಗಿ ವರದಿ ನೀಡಬೇಕು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು, ಗ್ರಾಮ ಪಂಚಾಯಿತಿ ಮತ್ತು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಶೀಘ್ರದಲ್ಲೇ ನೀರಿನ ಕನೆಕ್ಷನ್ ಕೊಡಿಸುವುದಾಗಿ ಉಪ ಕಾರ್ಯದರ್ಶಿ ರಮೇಶ್ ಅವರು ಸ್ಪಷ್ಟಪಡಿಸಿದರು.
ಸಭೆಯಲ್ಲಿ ೨೦೨೪-೨೫ ಹಾಗೂ ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶಗಳ ಪರಿಶೀಲನೆ ನಡೆಸಿ, ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಉತ್ತಮ ಫಲಿತಾಂಶ ಸಾಧಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ವಿಶೇಷ ತರಬೇತಿ ಕಾರ್ಯಕ್ರಮಗಳು ಹಾಗೂ ‘ಟಾಪರ್ಸ್ ಟಾಕ್’ ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸಾಧನೆಯನ್ನು ಹೆಚ್ಚಿಸಲು ಒತ್ತು ನೀಡಲಾಯಿತು.
ವಿದ್ಯಾರ್ಥಿನಿಲಯಗಳ ಮಂಜೂರಾತಿ, ಮೂಲಸೌಕರ್ಯ ಅಭಿವೃದ್ಧಿ, ಸಿಬ್ಬಂದಿ ಕೊರತೆ, ಖಾಲಿ ಹುದ್ದೆಗಳ ಭರ್ತಿ ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ೨೦೨೬-೨೭ನೇ ಸಾಲಿನಿಂದ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಸಂಬAಧಿತ ಇಲಾಖೆಗೆ ವರ್ಗಾಯಿಸುವ ಪ್ರಕ್ರಿಯೆ ಕುರಿತು ಮಾಹಿತಿ ನೀಡಲಾಯಿತು.
ವಿದ್ಯಾರ್ಥಿಗಳ ಕಲ್ಯಾಣ ಮತ್ತು ಸುರಕ್ಷತೆಗೆ ಆದ್ಯತೆ ನೀಡಿದ ಸಭೆಯಲ್ಲಿ ನಿಲಯಗಳಲ್ಲಿ ದೂರು ಹಾಗೂ ಸಲಹಾ ಪೆಟ್ಟಿಗೆಗಳನ್ನು ಅಳವಡಿಸುವುದು, ಮಕ್ಕಳ ಸಹಾಯವಾಣಿ ಸಂಖ್ಯೆ ೧೦೯೮ ಕುರಿತು ಜಾಗೃತಿ ಮೂಡಿಸುವುದು, ಮಕ್ಕಳ ಸ್ನೇಹಿ ವಾತಾವರಣ ನಿರ್ಮಿಸುವುದು ಹಾಗೂ ಸಂಜೆ ೬ ಗಂಟೆಯೊಳಗೆ ವಿದ್ಯಾರ್ಥಿಗಳ ಹಾಜರಾತಿ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಲಾಯಿತು.
ಇದೇ ವೇಳೆ ಬಿಎಸ್ಎನ್ಎಲ್ ಸಂಪರ್ಕ, ಪಿಎಫ್ಎಂಎಸ್ ಹಾಗೂ ಇ-ಆಫೀಸ್ ವ್ಯವಸ್ಥೆಗಳ ಸಮರ್ಪಕ ಬಳಕೆಗೆ ಒತ್ತು ನೀಡಲಾಯಿತು. ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಭೇಟಿ ಸಂದರ್ಭದಲ್ಲಿ ಸರ್ಕಾರಿ ನಿಯಮಾನುಸಾರ ಪ್ರೋಟೋಕಾಲ್ ಪಾಲಿಸುವಂತೆ ಸೂಚಿಸಲಾಯಿತು.
ವಿದ್ಯಾರ್ಥಿಗಳ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವಸತಿ ನಿಲಯಗಳಲ್ಲಿ ಆ್ಯಂಟಿ ಸುಸೈಡ್ ಸ್ಪ್ರಿಂಗ್ ಲೋಡೆಡ್ ಫ್ಯಾನ್ ರಾಡ್ ಅಳವಡಿಸುವಂತೆ ಸೂಚನೆ ನೀಡಲಾಯಿತು. ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ, ಸುರಕ್ಷಿತ ವಾತಾವರಣ ಮತ್ತು ಪರಿಣಾಮಕಾರಿ ಆಡಳಿತ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು..
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀನಿವಾಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೀತಾ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮೈಲಾರಪ್ಪ, ಜಿಲ್ಲಾ ಸಮನ್ವಯಾಧಿಕಾರಿ ಚಂದ್ರು ಆರ್.ವಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪ್ರಾಂಶುಪಾಲರು, ವಾರ್ಡನ್ಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್