ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಉದ್ಘಾಟನೆ
ಮಂಗಳೂರು, 22 ಮೇ (ಹಿ.ಸ.) : ಆ್ಯಂಕರ್ : ಮಂಗಳೂರಿನ ಕದ್ರಿಯ ಪದುವಾ ಶಾಲೆಯ ಸಮೀಪ ಸಮಾಜ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
Inauguration


ಮಂಗಳೂರು, 22 ಮೇ (ಹಿ.ಸ.) :

ಆ್ಯಂಕರ್ : ಮಂಗಳೂರಿನ ಕದ್ರಿಯ ಪದುವಾ ಶಾಲೆಯ ಸಮೀಪ ಸಮಾಜ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಗುಂಡೂರಾವ್, ಸಮಾಜದ ಹಿಂದುಳಿದ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಸತಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ವಿದ್ಯಾರ್ಥಿನಿಲಯ ನಿರ್ಮಾಣ ಮಾಡಲಾಗಿದೆ. ಉನ್ನತ ಶಿಕ್ಷಣಕ್ಕಾಗಿ ದೂರದ ಊರುಗಳಿಂದ ಮಂಗಳೂರಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಉತ್ತಮ ವಾತಾವರಣದಲ್ಲಿ ವಾಸ್ತವ್ಯ ಕಲ್ಪಿಸುವಲ್ಲಿ ಈ ವಿದ್ಯಾರ್ಥಿನಿಲಯ ಮಹತ್ವದ ಪಾತ್ರವಹಿಸಲಿದೆ ಎಂದರು.

ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ವಿದ್ಯಾರ್ಥಿನಿಲಯದಲ್ಲಿ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ತಮ್ಮ ವಿದ್ಯಾಭ್ಯಾಸ ಮುಂದುವರಿಸಲು ಅನುಕೂಲವಾಗಲಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ ಮತ್ತು ಶಿಕ್ಷಣದ ಚಿಂತನೆಗಳನ್ನು ಸಾಕಾರಗೊಳಿಸುವ ದಿಸೆಯಲ್ಲಿ ಇಂತಹ ಯೋಜನೆಗಳು ಮಹತ್ವಪೂರ್ಣವಾಗಿವೆ ಎಂದು ಗುಂಡೂರಾವ್ ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande