ದಾವಣಗೆರೆ ಅಂಚೆ ವಿಭಾಗದಲ್ಲಿ ಉದ್ಯೋಗಾವಕಾಶ
ಜೀವ ವಿಮೆ ಪ್ರತಿನಿಧಿಗಳು, ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಜೂನ್ 3ರಂದು ನೇರ ಸಂದರ್ಶನ
ದಾವಣಗೆರೆ ಅಂಚೆ ವಿಭಾಗದಲ್ಲಿ ಉದ್ಯೋಗಾವಕಾಶ


ದಾವಣಗೆರೆ, 22 ಮೇ (ಹಿ.ಸ.) :

ಆ್ಯಂಕರ್ : ಭಾರತೀಯ ಅಂಚೆ ಇಲಾಖೆಯ ದಾವಣಗೆರೆ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಯೋಜನೆಗಳಿಗೆ ನೇರ ವಿಮಾ ಪ್ರತಿನಿಧಿಗಳು ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರಗಳಿರುವ ರೆಸ್ಯೂಮ್, ಅಗತ್ಯ ಮೂಲ ದಾಖಲೆಗಳು ಹಾಗೂ ಅವುಗಳ ನಕಲು ಪ್ರತಿಗಳೊಂದಿಗೆ ಜೂನ್ 3ರಂದು ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಅಂಚೆ ಇಲಾಖೆ ತಿಳಿಸಿದೆ.

ಸಂದರ್ಶನವು ಭಾರತೀಯ ಅಂಚೆ ಇಲಾಖೆ ದಾವಣಗೆರೆ ಅಂಚೆ ವಿಭಾಗದ ಅಧೀಕ್ಷಕರ ಕಚೇರಿಯಲ್ಲಿ, ಗಡಿಯಾರ ಕಂಬದ ಹತ್ತಿರದ ಪ್ರಧಾನ ಅಂಚೆ ಕಚೇರಿ, ದಾವಣಗೆರೆ-577001ರಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿ ಮಹೇಶ್ ಎಸ್. (ಮೊಬೈಲ್: 9986038721) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande