ಸಚಿವ ಸಂಪುಟ ಸಭೆಯಲ್ಲಿ ‘ವಿಕಸಿತ ಭಾರತ’ ದೃಷ್ಟಿಕೋನದ ಕುರಿತು ಚರ್ಚೆ
ನವದೆಹಲಿ, 22 ಮೇ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ‘ಈಸ್ ಆಫ್ ಲಿವಿಂಗ್’, ‘ಈಸ್ ಆಫ್ ಡೂಯಿಂಗ್ ಬಿಸಿನೆಸ್’ ಹಾಗೂ ಆಡಳಿತಾತ್ಮಕ ಸುಧಾರಣೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ವ್ಯಾಪಕ ಚರ್ಚೆ ನಡೆಯಿತು. ಈ ಕುರಿತು ಸಾಮ
Meeting


ನವದೆಹಲಿ, 22 ಮೇ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ‘ಈಸ್ ಆಫ್ ಲಿವಿಂಗ್’, ‘ಈಸ್ ಆಫ್ ಡೂಯಿಂಗ್ ಬಿಸಿನೆಸ್’ ಹಾಗೂ ಆಡಳಿತಾತ್ಮಕ ಸುಧಾರಣೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ವ್ಯಾಪಕ ಚರ್ಚೆ ನಡೆಯಿತು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಗುರುವಾರ ನಡೆದ ಸಚಿವ ಸಂಪುಟ ಸಭೆ ಅತ್ಯಂತ ಫಲಪ್ರದವಾಗಿತ್ತು ಎಂದು ತಿಳಿಸಿದ್ದಾರೆ. ಸಭೆಯಲ್ಲಿ ವಿವಿಧ ಸಚಿವರು ತಮ್ಮ ಅಭಿಪ್ರಾಯಗಳು ಹಾಗೂ ಉತ್ತಮ ಕಾರ್ಯಪದ್ಧತಿಗಳನ್ನು ಪರಸ್ಪರ ಹಂಚಿಕೊಂಡರು ಎಂದರು.

ಸಾಮಾನ್ಯ ನಾಗರಿಕರ ಜೀವನವನ್ನು ಮತ್ತಷ್ಟು ಸುಲಭಗೊಳಿಸುವುದು, ಉದ್ಯಮ ಮತ್ತು ಹೂಡಿಕೆಗಳಿಗೆ ಅನುಕೂಲಕರ ವಾತಾವರಣ ನಿರ್ಮಿಸುವುದು ಹಾಗೂ ಸುಧಾರಣಾ ಕ್ರಮಗಳನ್ನು ವೇಗಗೊಳಿಸುವುದಕ್ಕೆ ವಿಶೇಷ ಒತ್ತು ನೀಡಲಾಗಿದೆ ಎಂದು ಪ್ರಧಾನಿ ಹೇಳಿದರು. ‘ವಿಕಸಿತ ಭಾರತ’ದ ಸಂಕಲ್ಪವನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದರು.

ಉಲ್ಲೇಖನೀಯವಾಗಿ, ಗುರುವಾರ ಸಂಜೆ ನಡೆದ ಉನ್ನತ ಮಟ್ಟದ ಸಚಿವ ಸಂಪುಟ ಸಭೆ ಸುಮಾರು ನಾಲ್ಕೂವರೆ ಗಂಟೆಗಳ ಕಾಲ ನಡೆಯಿತು. ನವದೆಹಲಿಯ ಸೇವಾ ತೀರ್ಥದಲ್ಲಿ ಸಂಜೆ 5 ಗಂಟೆಗೆ ಆರಂಭವಾದ ಸಭೆಯಲ್ಲಿ ಆಡಳಿತ ಸುಧಾರಣೆ, ಕಾರ್ಯಕ್ಷಮತೆ ವೃದ್ಧಿ ಹಾಗೂ ಸರ್ಕಾರದ ದೀರ್ಘಕಾಲೀನ ‘ವಿಕಸಿತ ಭಾರತ 2047’ ದೃಷ್ಟಿಕೋನದ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಸಭೆಯಲ್ಲಿ ಸುಮಾರು ಒಂಬತ್ತು ಸಚಿವರು ತಮ್ಮ ಸಚಿವಾಲಯಗಳ ಕಾರ್ಯಚಟುವಟಿಕೆಗಳ ಕುರಿತು ವಿವರವಾದ ಪ್ರಸ್ತುತಿಗಳನ್ನು ನೀಡಿದರು. ವಿವಿಧ ಇಲಾಖೆಗಳ ಸಾಧನೆ, ಯೋಜನೆಗಳ ಅನುಷ್ಠಾನ ಪ್ರಗತಿ ಹಾಗೂ ಮುಂದಿನ ಕಾರ್ಯತಂತ್ರಗಳ ಬಗ್ಗೆ ಸಮಗ್ರ ವಿಮರ್ಶೆ ನಡೆಸಲಾಯಿತು.

ಕಳೆದ ಎರಡು ವರ್ಷಗಳ ಸಚಿವರ ಕಾರ್ಯಕ್ಷಮತೆ, ಜನಪರ ಯೋಜನೆಗಳ ಪರಿಣಾಮಕಾರಿ ಜಾರಿಗೆ ಕೈಗೊಂಡ ಕ್ರಮಗಳು ಹಾಗೂ ಸಚಿವಾಲಯಗಳ ನಡುವಿನ ಸಮನ್ವಯದ ಕುರಿತೂ ಚರ್ಚೆ ನಡೆಯಿತು. ಜೊತೆಗೆ ಪಶ್ಚಿಮ ಏಷ್ಯಾದ ಇತ್ತೀಚಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೇಶದ ಆರ್ಥಿಕ ನೀತಿಗಳು, ಅಭಿವೃದ್ಧಿ ಯೋಜನೆಗಳು ಹಾಗೂ ಭವಿಷ್ಯದ ಅಭಿವೃದ್ಧಿ ಮಾರ್ಗಸೂಚಿಗಳ ಕುರಿತು ಸಚಿವ ಸಂಪುಟದಲ್ಲಿ ವಿಸ್ತೃತ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande