ರಾಜ್ಯದಲ್ಲಿ ಇಂದು ಮಳೆ, ಬಿಸಿಲಿನ ಮಿಶ್ರ ವಾತಾವರಣ
ಇಂದು
ರಾಜ್ಯದಲ್ಲಿ ಇಂದು ಮಳೆ, ಬಿಸಿಲಿನ ಮಿಶ್ರ ವಾತಾವರಣ


ಬೆಂಗಳೂರು, 22 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣ ಹವೆ ಮತ್ತು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಮಧ್ಯಾಹ್ನದ ಬಳಿಕ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಬಿಸಿಲಿನ ವಾತಾವರಣ ಕಂಡುಬಂದರೂ, ಸಂಜೆ ವೇಳೆಗೆ ಮೋಡ ಕವಿದು ತುಂತುರು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿಯೂ ಆರ್ದ್ರ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ವ್ಯಕ್ತವಾಗಿದೆ.

ಹವಾಮಾನ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ರೈತರು ಬೆಳೆ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದೆ. ಸಾರ್ವಜನಿಕರು ಗುಡುಗು ಮತ್ತು ಸಿಡಿಲಿನ ಸಮಯದಲ್ಲಿ ತೆರೆಯ ಪ್ರದೇಶಗಳಲ್ಲಿ ನಿಲ್ಲದಂತೆ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande