
ಬೆಂಗಳೂರು, 22 ಮೇ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನ ಸೌಧದಲ್ಲಿ ನೆಫ್ರೋ ಮೂತ್ರಶಾಸ್ತ್ರ ಸಂಸ್ಥೆಯ ಮಂಡಳಿಯ ಸಭೆ ನಡೆಯಿತು.
ಸಭೆಯಲ್ಲಿ ಸಂಸ್ಥೆಯ ಆಡಳಿತಾತ್ಮಕ ಹಾಗೂ ಅಭಿವೃದ್ಧಿ ಸಂಬಂಧಿತ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
ಮಂಡಳಿಯ ಉಪಾಧ್ಯಕ್ಷರೂ ಆಗಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸಭೆಯಲ್ಲಿ ಭಾಗವಹಿಸಿದ್ದರು.
ಇದರೊಂದಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಥೋಡ್, ಐಎನ್ಯು ನಿರ್ದೇಶಕ ಡಾ. ಎಂ. ಶಿವಲಿಂಗಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಮೂತ್ರಪಿಂಡ ಹಾಗೂ ಮೂತ್ರಶಾಸ್ತ್ರ ಚಿಕಿತ್ಸಾ ಸೇವೆಗಳ ಅಭಿವೃದ್ಧಿ, ಆರೋಗ್ಯ ಮೂಲಸೌಕರ್ಯ ಬಲವರ್ಧನೆ ಮತ್ತು ಸಂಸ್ಥೆಯ ಕಾರ್ಯವೈಖರಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.